
ಬೆಂಗಳೂರು: ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು ಕೃಷಿಮೇಳ–2025ರ ಪ್ರಯುಕ್ತ ರಾಜ್ಯಮಟ್ಟದ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗಳಿಗೆ ಐವರು ಕೃಷಿ ಸಾಧಕರನ್ನು ಆಯ್ಕೆ ಮಾಡಿದೆ.
ಎಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಗೆ ಕೋಲಾರ ತಾಲ್ಲೂಕು ಮದನಹಳ್ಳಿ ಗ್ರಾಮದ ರವಿಶಂಕರ್ ಎಂ.ಎನ್., ಎಂ.ಎಚ್. ಮರೀಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕೆ ರೈತ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಬೀಡಿಗಾನಹಳ್ಳಿಯ ಮಂಜುನಾಥ ಬಿ.ಆರ್. ಅವರನ್ನು ಆಯ್ಕೆ ಮಾಡಲಾಗಿದೆ.
ಕ್ಯಾನ್ ಬ್ಯಾಂಕ್ ರಾಜ್ಯ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಗೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲ್ಲೂಕು ಲಕ್ಷ್ಮೀಪುರ ಗ್ರಾಮದ ಶಿವರಾಜು ಎಲ್.ವಿ., ಕ್ಯಾನ್ ಬ್ಯಾಂಕ್ ರಾಜ್ಯ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿಗೆ ಪದ್ಮಿನಿ, ಆರ್. ದ್ವಾರಕಿನಾಥ್ ಅತ್ಯುತ್ತಮ ರೈತ ಪ್ರಶಸ್ತಿಗೆ ಗೋವಿಂದಪ್ಪ ಎಚ್.ಎಲ್. ಅವರನ್ನು ಆಯ್ಕೆ ಮಾಡಲಾಗಿದೆ.
ಇದಲ್ಲದೇ ಜಿಲ್ಲಾ ಮಟ್ಟದ ಪ್ರಗತಿಪರ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಆನೆಕಲ್ ತಾಲ್ಲೂಕು ಹಳೇಹಳ್ಳಿ ತಾಲ್ಲೂಕಿನ ಸತೀಶ್ ಕುಮಾರ್, ಯಲಹಂಕ ತಾಲ್ಲೂಕು ಚೊಕ್ಕನಹಳ್ಳಿ ಲಕ್ಷ್ಮಮ್ಮ ಸೇರಿದಂತೆ 12 ಸಾಧಕರನ್ನು ಆಯ್ಕೆ ಮಾಡಲಾಗಿದೆ.
ತಾಲ್ಲೂಕು ಮಟ್ಟದ ಯುವ ರೈತ ಮತ್ತು ಯುವ ರೈತ ಮಹಿಳೆ ಪ್ರಶಸ್ತಿಗೆ 74 ಮಂದಿಯನ್ನು ಆಯ್ಕೆ ಮಾಡಲಾಗಿದೆ ಎಂದು ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.