ADVERTISEMENT

ಕೆಎಸ್‌ಪಿಸಿಬಿ: ಮುಖ್ಯ ಕಾರ್ಯದರ್ಶಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 18 ಜನವರಿ 2020, 6:29 IST
Last Updated 18 ಜನವರಿ 2020, 6:29 IST
.
.   

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನಕ್ಕೆ ಎಂ. ಸುಧೀಂದ್ರರಾವ್ ನೇಮಕ ಮಾಡಿರುವು ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧಿಸಿದಂತೆರಾಜ್ಯ ಸರ್ಕಾರಕ್ಕೆನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ನೇತೃತ್ವದ
ವಿಭಾಗೀಯ ನ್ಯಾಯಪೀಠ, ಶುಕ್ರವಾರ ವಿಚಾರಣೆ ನಡೆಸಿ ಫೆಬ್ರುವರಿ 13ಕ್ಕೆ ಮುಂದೂಡಿದ್ದು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯ
ದರ್ಶಿ, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಹಾಗೂ ಎಂ. ಸುಧೀಂದ್ರರಾವ್ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ADVERTISEMENT

‘ಸುಧೀಂದ್ರರಾವ್ ಅವರನ್ನು ನೇಮಕ ಮಾಡಿ 2019ರ ಡಿಸೆಂಬರ್ 30ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಬೇಕು. ಮಂಡಳಿಯ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಗೆ ನಿಯಮಗಳನ್ನು ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ ಪರ ವಕೀಲ ಗುರುರಾಜ ಜೋಷಿ ಅವರು ಇದೇ ರೀತಿಯ ಮತ್ತೊಂದು ಅರ್ಜಿ ಅದನ್ನೂ ಇದರೊಟ್ಟಿಗೆ ವಿಚಾರಣೆ ನಡೆಸಬಹುದೆಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.