ADVERTISEMENT

ಹಿರಿಯ ನಾಗರಿಕರ ನಿರ್ಲಕ್ಷ: ನೋಟಾ ಮತ ಚಲಾವಣೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2024, 15:25 IST
Last Updated 28 ಮಾರ್ಚ್ 2024, 15:25 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ‘ಹಿರಿಯ ನಾಗರಿಕರನ್ನು ನಿರ್ಲಕ್ಷಿಸುತ್ತಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತ ಚಲಾಯಿಸುವ ಬಗ್ಗೆ ಚಿಂತನೆ ನಡೆದಿದೆ’ ಎಂದು ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ತಿಳಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಿ.ಎ. ಪಾಟೀಲ, ‘ಹಿರಿಯ ನಾಗರಿಕರನ್ನು ಕಾನೂನು ಬದ್ಧವಾಗಿ ರಾಷ್ಟ್ರದ ಸಂಪತ್ತು ಎಂದು ಘೋಷಿಸಬೇಕು. ಎಲ್ಲ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು ₹10 ಸಾವಿರ ಸಹಾಯ ಧನ, ಉಚಿತ ವೈದ್ಯಕೀಯ ಚಿಕಿತ್ಸೆ, ಜೀವವಿಮಾ ಸೌಲಭ್ಯ ನೀಡಬೇಕು. ಕೇಂದ್ರ ಮತ್ತು ರಾಜ್ಯದಲ್ಲಿ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಹಿರಿಯ ನಾಗರಿಕರ ರೈಲ್ವೆ ರಿಯಾಯತಿಯನ್ನು ತಕ್ಷಣ ಮರುಜಾರಿಗೊಳಿಸಬೇಕು. ಎಲ್ಲ ಪೊಲೀಸ್‌ ಠಾಣೆಗಳಲ್ಲಿ ಹಿರಿಯ ನಾಗರಿಕರ ಸಮಿತಿ ರಚಿಸಿ, ಹಿರಿಯ ನಾಗರಿಕರ ಮೇಲೆ ಆಗುವ ದೌರ್ಜನ್ಯಗಳನ್ನು ತಡೆಗಟ್ಟಬೇಕು. ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಬೇಕು. ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತ್ಯೇಕ ಹಿರಿಯ ನಾಗರಿಕರ ಭವನ ನಿರ್ಮಿಸಬೇಕು’ ಎಂದು ಒತ್ತಯಿಸಿದರು.

‘ಇದೇ 30ರಂದು ಬೆಂಗಳೂರಿನ ಜಯನಗರದ ಸಾಂಸ್ಕೃತಿಕ ಮತ್ತು ನಾಗರಿಕರ ಸಂಸ್ಥೆಯಲ್ಲಿ ನಡೆಯುವ ಸಭೆಯಲ್ಲಿ ನೋಟಾ ಮತ ಚಲಾಯವಣೆಯ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.