ಪ್ರಾತಿನಿಧಿಕ ಚಿತ್ರ
ಬೆಂಗಳೂರು: ‘ರಾಜ್ಯದ ಹಲವು ಭಾಗಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಬೇಕು’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಂಕರ್ ಗುಹಾ ದ್ವಾರಕನಾಥ್ ಒತ್ತಾಯಿಸಿದ್ದಾರೆ.
‘ಬಸವನಗುಡಿಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಒಂದು ವರ್ಷದ ಅವಧಿಯಲ್ಲಿ ಇದೇ ಸಂಸ್ಥೆಯಲ್ಲಿ ನಾನಾ ಕಾರಣಗಳಿಗೆ ನಾಲ್ಕೈದು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಪ್ರಕರಣಗಳನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಶಿಸ್ತಿನ ಹೆಸರಲ್ಲಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕ ಹಿಂಸೆ ನಡೆಸಿರುವುದನ್ನು ನೋಡಿದ್ದೇವೆ. ಇಂತಹ ಪ್ರಕರಣಗಳಲ್ಲಿ ಸರಿಯಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.
‘ಬಸವನಗುಡಿಯ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪ್ರಕರಣಗಳ ಬಗ್ಗೆ ಸ್ಥಳೀಯ ಶಾಸಕ ರವಿಸುಬ್ರಹ್ಮಣ್ಯ ಹಾಗೂ ಸಂಸದ ತೇಜಸ್ವಿ ಸೂರ್ಯ ಏಕೆ ಮಾತನಾಡುತ್ತಿಲ್ಲ’ ಎಂದು ಅವರು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.