ADVERTISEMENT

ರಾಜ್ಯದ ಪ್ರವಾಸೋದ್ಯಮ ವಿಶ್ವ ದರ್ಜೆಗೆ: ಸಿ.ಟಿ.ರವಿ ಭರವಸೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2019, 18:54 IST
Last Updated 28 ಆಗಸ್ಟ್ 2019, 18:54 IST
ಸಿ.ಟಿ.ರವಿ
ಸಿ.ಟಿ.ರವಿ   

ಬೆಂಗಳೂರು: ರಾಜ್ಯದ ಪ್ರವಾಸೋದ್ಯಮವನ್ನು ಜಾಗತಿಕ ಗುಣಮಟ್ಟಕ್ಕೆ ಸಮಾನವಾಗಿ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದರು.

ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬುಧವಾರ ಸಭೆ ನಡೆಯಿತು. ಬಳಿಕ ಅವರು ‘ಪ್ರಜಾವಾಣಿ’ ಜತೆ
ಮಾತನಾಡಿ, ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅಧ್ಯಕ್ಷತೆಯ ಕಾರ್ಯಪಡೆ ಸಲಹೆಗಳನ್ನು ನೀಡಿತು ಎಂದರು.

ಐತಿಹಾಸಿಕ, ಸಾಂಸ್ಕೃತಿಕ ಮತ್ತು ಪಾರಂಪರಿಕ ತಾಣಗಳನ್ನು ಗುರುತಿಸಿ, ಅವುಗಳನ್ನು ಸರ್ವರೀತಿಯಿಂದಲೂ ವಿಶ್ವ ಪ್ರವಾಸೋ
ದ್ಯಮ ಗುಣಮಟ್ಟಕ್ಕೆ ಏರಿಸಲಾಗುವುದು. ಇದರಿಂದ ಸಾಕಷ್ಟು ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಬಹುದು. ಇದಕ್ಕೆ ಪೂರಕವಾಗಿ ಸ್ಥಳೀಯ ಮಟ್ಟದಲ್ಲಿ ಕೌಶಲ ಅಭಿವೃದ್ಧಿ, ಸ್ಥಳೀಯ ಆಹಾರ ಪದ್ಧತಿಯನ್ನು ಹೊರ ಜಗತ್ತಿಗೆ ಪರಿಚಯಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ರವಿ ಹೇಳಿದರು.

ADVERTISEMENT

ಪ್ರಾದೇಶಿಕ ಮಟ್ಟದಲ್ಲಿ ಆಹಾರ ಮೇಳಗಳನ್ನು ನಡೆಸಿ, ಆಹಾರ ಪ್ರಿಯರನ್ನೂ ಸೆಳೆಯುವ ಮೂಲಕ ಖಾದ್ಯಗಳ ಪ್ರವಾಸೋದ್ಯಮ ಬೆಳೆಸಲು ಅವಕಾಶವಿದೆ. ಹೀಗೆ ಹಲವು ಬಗೆಯ ಪ್ರವಾಸೋದ್ಯಮ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವ ಬಗ್ಗೆ ಚಿಂತನೆ ನಡೆದಿದೆ.ಇದಕ್ಕಾಗಿ ‘ಹೊಸ ಪ್ರವಾಸೋದ್ಯಮ ನೀತಿ’ ರೂಪಿಸುವ ಚಿಂತನೆ ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.