ಸಾರಿಗೆ ಮುಷ್ಕರ
ಬೆಂಗಳೂರು: ಹೈಕೋರ್ಟ್ ಆದೇಶವನ್ನು ಗೌರವಿಸಿ, ಮುಷ್ಕರ ಮುಂದೂಡಲು ತೀರ್ಮಾನಿಸಿದ್ದೇವೆ. ಸರ್ಕಾರ ಈ ಅವಕಾಶ ಉಪಯೋಗಿಸಿಕೊಂಡು ಬೇಡಿಕೆಗಳನ್ನು ಇತ್ಯರ್ಥ ಮಾಡಬೇಕು. ಸಾರಿಗೆ ನಿಗಮಗಳ ಎಲ್ಲ ನೌಕರರಿಗೂ ನ್ಯಾಯ ಕೊಡಬೇಕು’ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಈ ಕುರಿತು ಮಾತನಾಡಿದ ಕ್ರಿಯಾ ಸಮಿತಿಯ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್, ‘ಪ್ರಯಾಣಿಕರಿಗೆ ತೊಂದರೆಯಾಗುತ್ತದೆ ಎಂದು ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಷ್ಕರ ಮುಂದೂಡುವಂತೆ ಸೂಚಿಸಿತ್ತು. ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದರಿಂದಾಗಿ, ಒಬ್ಬರೇ ತೀರ್ಮಾನ ತೆಗೆದುಕೊಳ್ಳುವಂತಿರಲಿಲ್ಲ. ಸಮಿತಿಯ ಎಲ್ಲ ಪದಾಧಿಕಾರಿಗಳು ಚರ್ಚಿಸಿ, ಕೋರ್ಟ್ ನಿರ್ದೇಶನದಂತೆ ಮುಂದೂಡುವ ನಿರ್ಧಾರ ತೆಗೆದುಕೊಂಡಿದ್ದೇವೆ. ಆ.7ರ ತೀರ್ಪು ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.