
ಕನಿಷ್ಠ ತಾಪಮಾನ
ಬೆಂಗಳೂರು: ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನ ಒಣ ಹವೆ ಮುಂದುವರಿಯಲಿದೆ. ಆನಂತರ ಕೆಲವು ಕಡೆ ಕನಿಷ್ಠ ತಾಪಮಾನದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಬಹುದು ಎಂದು ಭಾರತೀಯ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ಬೀದರ್ ಹಾಗೂ ದಾವಣಗೆರೆಯಲ್ಲಿ ಶುಕ್ರವಾರ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದೆ ಎಂದು ಕೇಂದ್ರದ ಬೆಂಗಳೂರು ಮುಖ್ಯಸ್ಥ ಎನ್.ಪುವಿಯರಸನ್ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ, ಕಳಸ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಹಾಸನ ಜಿಲ್ಲೆಯ ಅರಕಲಗೂಡು, ಉಡುಪಿ ಜಿಲ್ಲೆಯ ಕೋಟ ಭಾಗದಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ತುಂತುರು ಮಳೆಯಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.