ADVERTISEMENT

ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ನ.15ರಿಂದ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2025, 13:49 IST
Last Updated 13 ನವೆಂಬರ್ 2025, 13:49 IST
   

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದೇ 15ರಿಂದ 24ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ಡಿಸೆಂಬರ್‌ 14 ರಂದು ಚುನಾವಣೆ ನಡೆಯಲಿದೆ. ಇದೇ 25ರಂದು ಮಧ್ಯಾಹ್ನ 4 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಸಿ, ಪ್ರಾಥಮಿಕ ಪಟ್ಟಿ ಪ್ರಕಟಿಸಲಾಗುತ್ತದೆ. ನಾಮಪತ್ರಗಳನ್ನು ಹಿಂಪಡೆಯಲು 28ರ ಮಧ್ಯಾಹ್ನ 12ರಿಂದ ಸಂಜೆ 4 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಅಂತಿಮ ಪಟ್ಟಿಯು 29ರಂದು ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಡಿ.14ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂದು ಚುನಾವಣಾಧಿಕಾರಿ ಪ್ರತಿಭಾ ಆರ್. ತಿಳಿಸಿದ್ದಾರೆ. 

ಬೆಂಗಳೂರಿನ ಶಂಕರಪುರದಲ್ಲಿರುವ ಅಶೋಕ ಶಿಶುವಿಹಾರದಲ್ಲಿ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಫಲಿತಾಂಶ ಘೋಷಿಸಲಾಗುವುದು ಎಂದು ಹೇಳಿದ್ದಾರೆ. 

ADVERTISEMENT

ಸಂಘದ ಮತದಾರರ ಪಟ್ಟಿಯಲ್ಲಿರುವ ವಿಳಾಸಗಳಿಗೆ ಚುನಾವಣಾ ಮಾಹಿತಿಗಳನ್ನು ಅಂಚೆ ಮೂಲಕ ಕಳುಹಿಸಲಾಗುತ್ತದೆ. ವಿಳಾಸ ಬದಲಾದವರು ಅಥವಾ ಬದಲಾಯಿಸುವರು ಇದೇ 19ರ ಒಳಗೆ ಮೊ.ಸಂಖ್ಯೆ 9945294865ಕ್ಕೆ ಸಂಪರ್ಕಿಸಬೇಕು. ನಂತರ ಯಾವುದೇ ಬದಲಾವಣೆಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.