ADVERTISEMENT

ಲೇಖಕಿಯರ ಸಂಘ: ಅಧ್ಯಕ್ಷೆ ಕಾರ್ಯವೈಖರಿ ಬಗ್ಗೆ ಅಸಮಾಧಾನ; ನಾಲ್ವರು ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 16:20 IST
Last Updated 28 ಸೆಪ್ಟೆಂಬರ್ 2025, 16:20 IST
   

ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್.ಪುಷ್ಪ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಸ್ಫೋಟಗೊಂಡಿದ್ದು, ನಾಲ್ವರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. 

ಪುಷ್ಪ ಅವರು ಲೆಕ್ಕಪತ್ರಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿಲ್ಲ ಹಾಗೂ ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ ಎಂದು ಆರೋಪಿಸಿ, ಸಂಘದ ಕಾರ್ಯದರ್ಶಿ ಭಾರತಿ ಹೆಗಡೆ, ಸಹ ಕಾರ್ಯದರ್ಶಿ ಸುಮಾ ಸತೀಶ್, ಉಪಾಧ್ಯಕ್ಷೆ ಜಯಲಕ್ಷ್ಮಿ ಪಾಟೀಲ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯೆ ಸರ್ವಮಂಗಳ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

‘ಮಾರ್ಚ್ 22 ಮತ್ತು 23 ರಂದು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಭವನದಲ್ಲಿ ನಡೆದ ಕರ್ನಾಟಕ ಲೇಖಕಿಯರ ಸಮ್ಮೇಳನದ ಲೆಕ್ಕಪತ್ರಗಳ ಬಗ್ಗೆ, ಸಂಘದ ಅಧ್ಯಕ್ಷರಾದ ಪುಷ್ಪ ಅವರು ಸಮರ್ಪಕವಾದ ರೀತಿಯಲ್ಲಿ ವಿವರಣೆ ನೀಡುತ್ತಿಲ್ಲ. ಅಧ್ಯಕ್ಷರಿಂದ ಲೆಕ್ಕಪತ್ರಗಳ ಅಸಮರ್ಪಕ ನಿರ್ವಹಣೆ, ಹಣಕಾಸಿನ ಅಶಿಸ್ತು, ಪಾರದರ್ಶಕತೆ ಇಲ್ಲದಿರುವಿಕೆ, ಸರ್ವಾಧಿಕಾರಿ ಧೋರಣೆಯಿಂದ ಬೇಸತ್ತು ರಾಜೀನಾಮೆ ನೀಡುತ್ತಿದ್ದೇವೆ. ಅಧ್ಯಕ್ಷರು ತೋರಿಸುತ್ತಿರುವ ಲೆಕ್ಕ ಪತ್ರಗಳಿಗೂ ನಮಗೂ ಯಾವುದೇ ಸಂಬಂಧ ಇಲ್ಲ’ ಎಂದು ರಾಜೀನಾಮೆ ಪತ್ರದಲ್ಲಿ ನಾಲ್ವರು ತಿಳಿಸಿದ್ದಾರೆ. 

ADVERTISEMENT

‘ಸಮ್ಮೇಳನದ ನಂತರ ದಾನಿಗಳು ಸಂಘಕ್ಕೆ ಒಂದಷ್ಟು ಹಣ ನೀಡಿದ್ದು, ಈ ಹಣವನ್ನು ಪ್ರಕಟಣೆಗಳಿಗೆ ಬಳಸಿಕೊಳ್ಳಲಾಗಿದೆ. ಹಣಕಾಸಿನ ವ್ಯವಹಾರ ಪಾರದರ್ಶಕವಾಗಿದ್ದು, ಸಮ್ಮೇಳನದ ಖರ್ಚು ವೆಚ್ಚಕ್ಕೆ ಸಂಬಂಧಿಸಿದಂತೆ ಲೆಕ್ಕಪರಿಶೋಧನೆ ಮಾಡಿಸಲಾಗಿದೆ’ ಎಂದು ಎಚ್.ಎಲ್. ಪುಷ್ಪ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.