ADVERTISEMENT

ಲೇಖಕಿ ಗಿರಿಜಾಗೆ ಕಸಾಪ ದತ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 14:25 IST
Last Updated 11 ಸೆಪ್ಟೆಂಬರ್ 2025, 14:25 IST
ಎಲ್.ಗಿರಿಜಾ ರಾಜ್
ಎಲ್.ಗಿರಿಜಾ ರಾಜ್   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಮನೋಹರಿ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿ’ಗೆ ಲೇಖಕಿ ಎಲ್.ಗಿರಿಜಾ ರಾಜ್ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ₹ 10 ಸಾವಿರ ನಗದು ಒಳಗೊಂಡಿದೆ. ಸಾಹಿತ್ಯ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಪುರಸ್ಕರಿಸಲು ಅತ್ತಿಮಬ್ಬೆ ಪ್ರತಿಷ್ಠಾನ ಟ್ರಸ್ಟ್ ಈ ದತ್ತಿ ಸ್ಥಾಪಿಸಿದೆ.

2025ನೇ ಸಾಲಿಗೆ ಈ ದತ್ತಿ ಪ್ರಶಸ್ತಿಗೆ ಭಾಜನರಾಗಿರುವ ಚಿತ್ರದುರ್ಗದ ಎಲ್.ಗಿರಿಜಾ ರಾಜ್ ಅವರು, ಸದ್ಯ ಬೆಂಗಳೂರಿನಲ್ಲಿ ನೆಲಸಿದ್ದಾರೆ. ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿರುವ ಅವರ 16 ಕೃತಿಗಳು ಪ್ರಕಟಗೊಂಡಿವೆ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.