ADVERTISEMENT

ಸಾಹಿತ್ಯ ಸಮ್ಮೇಳನ: ವಿಷಯ ಆಯ್ಕೆಗೆ ಸಭೆ ಇಂದು

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 5:57 IST
Last Updated 17 ಸೆಪ್ಟೆಂಬರ್ 2022, 5:57 IST
ಮಹೇಶ ಜೋಶಿ
ಮಹೇಶ ಜೋಶಿ   

ಬೆಂಗಳೂರು:ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಗೋಷ್ಠಿಗಳ ವಿಷಯ ಮತ್ತುಸಂಪನ್ಮೂಲ ವ್ಯಕ್ತಿಗಳ ಆಯ್ಕೆಗೆ ಸಂಬಂಧಿಸಿದಂತೆಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿಯು ಶನಿವಾರ ಬೆಳಿಗ್ಗೆ 11 ಗಂಟೆಗೆ ಪ್ರಥಮ ಸಭೆ ಹಮ್ಮಿಕೊಂಡಿದೆ.

ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಈ ಸಭೆ ನಡೆಯಲಿದೆ. 2022ರ ನ.11, 12 ಮತ್ತು 13ರಂದು ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಗೋಷ್ಠಿಗಳಿಗೆ ವಿಷಯ ಹಾಗೂ ಸಂಪನ್ಮೂಲ ವ್ಯಕ್ತಿಗಳ ಆಯ್ಕೆಗೆ ರಚಿಸಲಾದ ಸಮಿತಿಯು ನಿವೃತ್ತ ನ್ಯಾಯಾಧೀಶರು, ಸಾಹಿತಿಗಳು, ಕನ್ನಡ ಪರ ಹೋರಾಟಗಾರರು ಹಾಗೂ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ಒಳಗೊಂಡಿದೆ.

‘ಸಾಹಿತ್ಯ ಸಮ್ಮೇಳನದ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಈ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯದ ಪರಂಪರೆ, ವರ್ತಮಾನದ ಸವಾಲುಗಳು,ಭವಿಷ್ಯದ ಸಾಧ್ಯತೆಗಳು,ಕನ್ನಡಪರ ಚಿಂತನೆಯ ವಿಸ್ತಾರ,ನಾಡು– ನುಡಿಯ ಸಮಸ್ಯೆಗಳು ಮತ್ತು ಪರಿಹಾರ,ಕನ್ನಡಶಾಲೆಗಳಉಳಿವು,ಕನ್ನಡವನ್ನು ಅನ್ನದಭಾಷೆಯನ್ನಾಗಿಸುವಪ್ರಯತ್ನಗಳು, ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ’ ‌ಅನುಷ್ಠಾನ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ’ ಎಂದು ಮಹೇಶ ಜೋಶಿ ತಿಳಿಸಿದ್ದಾರೆ.

ADVERTISEMENT

‘ಸಮ್ಮೇಳನದಲ್ಲಿ ಪ್ರಧಾನ ವೇದಿಕೆ ಮತ್ತು ಸಮಾನಾಂತರ ವೇದಿಕೆಗಳಲ್ಲಿ ನಾನಾ ಗೋಷ್ಠಿಗಳು ಹಾಗೂ ಸಂವಾದಗಳು ನಡೆಯಲಿವೆ. ಈ ಗೋಷ್ಠಿಗಳ ವಿಷಯಗಳು ಮತ್ತು ಸಂಪನ್ಮೂಲ ವ್ಯಕ್ತಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.