ADVERTISEMENT

ಡಿಸೆಂಬರ್ 2ನೇ ವಾರ ಬೆಂಗಳೂರಿನಲ್ಲಿ ಕಾಸರಗೋಡು ಸಮ್ಮೇಳನ

ಕಾಸರಗೋಡು ಕನ್ನಡಿಗರಿಗೆ ಅನ್ಯಾಯ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2025, 20:44 IST
Last Updated 23 ನವೆಂಬರ್ 2025, 20:44 IST
ವಾಟಾಳ್ ನಾಗರಾಜ್
ವಾಟಾಳ್ ನಾಗರಾಜ್   

ಮಂಗಳೂರು: ‘ಕಾಸರಗೋಡು ಜಿಲ್ಲೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಡಿಸೆಂಬರ್ 2ನೇ ವಾರ ಬೆಂಗಳೂರಿನಲ್ಲಿ ‘ಕಾಸರಗೋಡು ಸಮ್ಮೇಳನ’ ಆಯೋಜಿಸಲಾಗುವುದು’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.

‘ಕಾಸರಗೋಡಿನಲ್ಲಿ ಮಲಯಾಳೀಕರಣದ ಸಂಚು ನಡೆಯುತ್ತಿದೆ’ ಎಂದು ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಡಿಸೆಂಬರ್ 3ನೇ ವಾರದಲ್ಲಿ ಮಂಗಳೂರು- ಕಾಸರಗೋಡು ಹೆದ್ದಾರಿ ಬಂದ್ ಮಾಡಿ ಸತ್ಯಾಗ್ರಹ ನಡೆಸಲಾಗುವುದು ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT