ADVERTISEMENT

ಕಾಸರಗೋಡು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲೆಯಾಳ ಭಾಷೆ ಕಡ್ಡಾಯ: ಖಂಡನೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 16:31 IST
Last Updated 9 ಜನವರಿ 2026, 16:31 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲೆಯಾಳ ಕಲಿಸಲು ಅಲ್ಲಿನ ಸರ್ಕಾರ ನಿರ್ಧಾರ ಮಾಡಿರುವುದನ್ನು ದಂಡು ಪ್ರದೇಶ ಕನ್ನಡ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ಗಡಿ ಹೋರಾಟ ಸಮಿತಿ ಖಂಡಿಸಿದೆ.

ಕನ್ನಡ ವಿದ್ಯಾರ್ಥಿಗಳ ಮೇಲೆ ಮಲೆಯಾಳ ಭಾಷೆ ಏರಿಕೆ ಸಲ್ಲದು. ಚುನಾವಣೆ ಸಮಯದಲ್ಲಿ ಮತಕ್ಕಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಕೈಗೊಂಡಿರುವ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲವಾದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆಸಿ.ಜಗನ್ನಾಥ ರೆಡ್ಡಿ ಮತ್ತು ಪ್ರಧಾನ ಕಾರ್ಯದರ್ಶಿ ಎನ್.ಮುನಿರಾಜು ಎಚ್ಚರಿಸಿದ್ದಾರೆ.

ADVERTISEMENT

'ಕಾಸರಗೋಡಿನ ಪಯಶ್ವಿನಿ ನದಿತಟದಿಂದ ತಲಪಾಡಿನವರೆಗೂ ಬಹುಸಂಖ್ಯಾತ ಕನ್ನಡಿಗರಿದ್ದು, ಸುಮಾರು 204 ಕನ್ನಡ ಶಾಲೆಗಳಿವೆ. ಮತಕ್ಕಾಗಿ ಪಿಣರಾಯಿ ವಿಜಯನ್ ಅವರು ಕೇರಳಿಗರನ್ನು ಕನ್ನಡಿಗರ ಮೇಲೆ ಎತ್ತಿಕಟ್ಟುವ ಹುನ್ನಾರ ನಡೆಸುತ್ತಿದ್ದಾರೆ' ಎಂದು ಗಡಿ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಬಿ.ಕೆ.ಆರ್‌.ರಾವ್ ಬೈಂದೂರ್ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.