ADVERTISEMENT

ಕೆಎಟಿ ವಿಡಿಯೊ ಕಾನ್ಫರೆನ್ಸ್‌ಗೆ ಅಡ್ಡಿ: ಎಫ್‌ಐಆರ್ ದಾಖಲು

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2023, 20:19 IST
Last Updated 10 ಡಿಸೆಂಬರ್ 2023, 20:19 IST
   

ಬೆಂಗಳೂರು: ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ (ಕೆಎಟಿ) ವಿಡಿಯೊ ಕಾನ್ಫರೆನ್ಸ್‌ಗೆ ಅಪರಿಚಿತರು ಅಡ್ಡಿಪಡಿಸಿದ್ದು, ಈ ಬಗ್ಗೆ ಕೇಂದ್ರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸೈಬರ್ ಭದ್ರತೆ ಕಾರಣದಿಂದಾಗಿ ಕೆಎಟಿ ವಿಡಿಯೊ ಕಾನ್ಫರೆನ್ಸ್ ಸೇವೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ವಿಡಿಯೊ ಕಾನ್ಫರೆನ್ಸ್‌ಗೆ ಅಡ್ಡಿಪಡಿಸಿದ್ದವರ ವಿರುದ್ಧ ಕೆಎಟಿ ಅಧಿಕಾರಿ ವಿನೀತಾ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

‘ಡಿ. 8ರಂದು ಮಧ್ಯಾಹ್ನ 3 ಗಂಟೆಗೆ ಹಾಲ್‌–1ರಲ್ಲಿ ಕೆಎಟಿ ಮುಖ್ಯಸ್ಥರು ವಿಡಿಯೊ ಕಾನ್ಫರೆನ್ಸ್ ಆರಂಭಿಸಿದ್ದರು. ಇದೇ ಸಂದರ್ಭದಲ್ಲಿ ಲಾಗ್–ಇನ್ ಆಗಿದ್ದ ಅಪರಿಚಿತರು, ಅಶ್ಲೀಲ ಚಿತ್ರ ಪ್ರದರ್ಶಿಸಿ ನ್ಯಾಯಾಲಯದ ಕಲಾಪಕ್ಕೆ ಹಾಗೂ ಕೆಎಟಿ ಮುಖ್ಯಸ್ಥರ ವಿಡಿಯೊ ಕಾನ್ಸರೆನ್ಸ್‌ಗೆ ಅಡ್ಡಿಪಡಿಸಿದ್ದಾರೆ. ಅಪರಿಚಿತರನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಿ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಮಾಹಿತಿ ತಂತ್ರಜ್ಞಾನ ಕಾಯ್ದೆ–2008ರ ಕಲಂ 67 ಮತ್ತು 67 ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.