ADVERTISEMENT

ಕೆಎಟಿ ಅಧ್ಯಕ್ಷರ ರಿಟ್‌ ವಜಾ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2019, 20:18 IST
Last Updated 12 ಏಪ್ರಿಲ್ 2019, 20:18 IST

ಬೆಂಗಳೂರು: ‘ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ನೀಡುವಷ್ಟೇ ಸಮಾನ ವೇತನವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಅಧ್ಯಕ್ಷರಿಗೂ ನೀಡಬೇಕು’ ಎಂದು ಕೋರಿ ಕೆಎಟಿ ಅಧ್ಯಕ್ಷ ಕೆ.ಭಕ್ತವತ್ಸಲ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಈ ಕುರಿತ ಆದೇಶವನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ.

‘ಇಂತಹ ಬೇಡಿಕೆಗೆ ಕಾನೂನಿನಲ್ಲಿ ಅವಕಾಶವಿಲ್ಲ’ ಎಂಬ ಕೇಂದ್ರ ಸರ್ಕಾರದ ವಾದವನ್ನು ನ್ಯಾಯಪೀಠ ಮಾನ್ಯ ಮಾಡಿದೆ. ‘ಕೆಎಟಿ ಅಧ್ಯಕ್ಷರ ಹುದ್ದೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಕೇಂದ್ರೀಯ ಆಡಳಿತ ನ್ಯಾಯಮಂಡಳಿಯ ಅಧ್ಯಕ್ಷರಷ್ಟೇ ವೇತನ ಕೆಎಟಿ ಅಧ್ಯಕ್ಷರಿಗೂ ನೀಡಬೇಕು’ ಎಂದು ಭಕ್ತವತ್ಸಲ ಕೋರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.