ADVERTISEMENT

ಮೆಟ್ರೊ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ, ಕಾವೇರಿ ನೀರಿನ ದರವೂ ಏರಿಕೆ?

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 20:11 IST
Last Updated 5 ಫೆಬ್ರುವರಿ 2026, 20:11 IST
ಜಲಮಂಡಳಿ
ಜಲಮಂಡಳಿ   

ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ, ಕಾವೇರಿ ನೀರಿನ ದರವೂ ಏರಿಕೆಯಾಗುವ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಪ್ರತಿ ವರ್ಷ ಏಪ್ರಿಲ್‌ 1ರಿಂದ ನೀರಿನ ದರ ಶೇ 3ರಷ್ಟು ಹೆಚ್ಚಳವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧ್ಯಕ್ಷ ರಾಮ ಪ್ರಸಾತ್‌ ಮನೋಹರ್ ಕಳೆದ ವರ್ಷ ನೀಡಿದ್ದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ.

ಪ್ರತಿ ವರ್ಷ ನೀರಿನ ದರವನ್ನು ಪರಿಷ್ಕರಿಸಬೇಕು ಎಂದು ಆಡಳಿತ ಸುಧಾರಣಾ ಆಯೋಗ ಶಿಫಾರಸು ಮಾಡಿತ್ತು. ಕಳೆದ ವರ್ಷ ಏಪ್ರಿಲ್‌ನಲ್ಲಿ ಗೃಹ ಬಳಕೆದಾರರಿಗೆ ಪ್ರತಿ ಲೀಟರ್‌ಗೆ ಕನಿಷ್ಠ 0.15 ಪೈಸೆಯಿಂದ ಗರಿಷ್ಠ 1 ಪೈಸೆಯವರೆಗೆ ನೀರಿನ ದರ ಹೆಚ್ಚಳ ಮಾಡಲಾಗಿತ್ತು. ವಾಣಿಜ್ಯ ಬಳಕೆದಾರರಿಗೆ ಪ್ರತಿ ಲೀಟರ್‌ಗೆ ಗರಿಷ್ಠ 1.90 ಪೈಸೆಯವರೆಗೆ ದರ ಏರಿಕೆ ಮಾಡಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷ ರಾಮ ಪ್ರಸಾತ್‌ ಮನೋಹರ್ ಅವರಿಗೆ ಕರೆ ಮಾಡಿದರೆ ಸ್ವೀಕರಿಸಲಿಲ್ಲ. ‘ಸದ್ಯಕ್ಕೆ ಈ ಬಗ್ಗೆ ಯಾವುದೇ ಚರ್ಚೆ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.