
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕರ್ನಾಟಕ ರಾಜ್ಯ ಕೃಷಿ ಮಾರುಕಟ್ಟೆ ಇಲಾಖೆಯ ಪಿಂಚಣಿದಾರರ ಸಂಘ ನೀಡುವ 2025ನೇ ಸಾಲಿನ ಕನ್ನಡ ಸಿರಿ ಪ್ರಶಸ್ತಿಗೆ ಕವಿ ಬಿ.ಆರ್.ಲಕ್ಷ್ಮಣರಾವ್ ಅವರನ್ನು ಆಯ್ಕೆ ಮಾಡಲಾಗಿದೆ.
₹ 10 ಸಾವಿರ ನಗದು, ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದ್ದು, ನ.1ರಂದು ಯಶವಂತಪುರದಲ್ಲಿರುವ ಸಂಘದ ಸಭಾಂಗಣದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಎ.ಶ್ರೀನಿವಾಸ ತಿಳಿಸಿದ್ದಾರೆ.
ಇದಲ್ಲದೇ ಸಂಘದ ಸದಸ್ಯರಿಗೆ ನೀಡುವ ಪ್ರತಿಭಾಶ್ರೀ ಪ್ರಶಸ್ತಿಯನ್ನು ರಂಗಭೂಮಿ ಕಲಾವಿದ ಎಂ.ಎನ್.ವೆಂಕಟಸುಬ್ಬರಾವ್, ಕ್ರೀಡಾಪಟು ಎಚ್.ಎನ್.ಗೋಪಾಲ ಅವರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.