ADVERTISEMENT

ಸಂಯುಕ್ತ ಹೆಗಡೆ ಕ್ಷಮೆ ಯಾಚಿಸಿದ ಕವಿತಾ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 21:23 IST
Last Updated 6 ಸೆಪ್ಟೆಂಬರ್ 2020, 21:23 IST
ಕವಿತಾ ರೆಡ್ಡಿ
ಕವಿತಾ ರೆಡ್ಡಿ    

ಬೆಂಗಳೂರು: ಸರ್ಜಾಪುರ ರಸ್ತೆಯ ಅಗರ ಕೆರೆಯ ಉದ್ಯಾನದಲ್ಲಿ ನಟಿ ಸಂಯುಕ್ತಾ ಹೆಗಡೆ ಮತ್ತು ಅವರ ಗೆಳತಿಯರ ಜೊತೆ ಮಾತಿನ ಚಕಮಕಿ ನಡೆಸಿದ್ದ ಸ್ಥಳೀಯ ನಿವಾಸಿ ಕವಿತಾ ರೆಡ್ಡಿ ಕ್ಷಮೆ ಯಾಚಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ನೈತಿಕ ಪೊಲೀಸ್‌ಗಿರಿಯನ್ನು ನಾನು ಯಾವಾಗಲೂ ವಿರೋಧಿಸುತ್ತೇನೆ. ನನಗೆ ನನ್ನ ತಪ್ಪಿನ ಅರಿವಾಗಿದೆ. ಜವಾಬ್ದಾರಿಯತ ನಾಗರಿಕಳಾಗಿ ಮತ್ತು ಪ್ರಗತಿಪರ ಮಹಿಳೆಯಾಗಿ ಈ ವಿಷಯದಲ್ಲಿ ಸಂಯುಕ್ತಾ ಹೆಗಡೆ ಮತ್ತು ಅವರ ಗೆಳತಿಯರ ಬಳಿ ಕ್ಷಮೆ ಯಾಚಿಸುತ್ತೇನೆ’ ಎಂದಿದ್ದಾರೆ.

ಸಂಯುಕ್ತಾ ಹೆಗಡೆ ಮತ್ತು ಅವರ ಗೆಳತಿಯರು ಉದ್ಯಾನದಲ್ಲಿ ಶುಕ್ರವಾರ ಸಂಜೆ ಹಾಡು ಹಾಡುತ್ತಿದ್ದ ವೇಳೆ, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕವಿತಾ ರೆಡ್ಡಿ ವಾಗ್ವಾದ ನಡೆಸಿದ್ದರು. ಕಾಂಗ್ರೆಸ್‌ ಪಕ್ಷದಲ್ಲಿ ಕವಿತಾ ಸಕ್ರಿಯವಾಗಿದ್ದಾರೆ. ಕವಿತಾ ಅವರ ನಡೆಯನ್ನು ಬಿಜೆಪಿ ವಿರೋಧಿಸಿದ್ದರಿಂದ, ಈ ಘಟನೆ ಸ್ಥಳೀಯವಾಗಿ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.