
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ ‘ಕಾಯಕ ಶರಣಶ್ರೀ ಪ್ರಶಸ್ತಿ’ಗೆ ಶಿಕ್ಷಣ ತಜ್ಞ ಪ್ರೊ.ಎಚ್. ಲಿಂಗಪ್ಪ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹5 ಲಕ್ಷ ನಗದು ಒಳಗೊಂಡಿದೆ. ಕಾಯಕ ಶರಣ ಜಯಂತಿಯ ಅಂಗವಾಗಿ ಸ್ಥಾಪಿಸಿರುವ ಈ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ನೀಡಲಾಗುತ್ತಿದೆ. ದಾವಣಗೆರೆಯ ಜಗಳೂರಿನ ಲಿಂಗಪ್ಪ ಅವರು, ಶಿವಶರಣರ ಆದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಿದ್ದಾರೆ.
‘ಉರಿಲಿಂಗಪೆದ್ದಿ’, ‘ಬುದ್ಧ ಪ್ರಜ್ಞೆಯ ಕಾಯಕ ಜೀವಿಗಳು’ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ಕವಿ ಎಲ್. ಹನುಮಂತಯ್ಯ ಅವರ ಅಧ್ಯಕ್ಷತೆ ಸಮಿತಿ ಈ ಆಯ್ಕೆ ಮಾಡಿದೆ. ಮಂಗಳವಾರ (ಫೆ.10) ಸಂಜೆ 5 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕಾಯಕ ಶರಣರ ಜಯಂತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.