ಪ್ರಾತಿನಿಧಿಕ ಚಿತ್ರ
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಎರಡನೇ ಮುಂದುವರಿದ ಸುತ್ತು ಹಾಗೂ ಯುಜಿಸಿಇಟಿ ಕೋರ್ಸ್‌ಗಳ 3ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಆಯ್ಕೆಗಳ ಅದಲು-ಬದಲು ಹಾಗೂ ಹೊಸದಾಗಿ ಸೇರಿಸುವುದಕ್ಕೆ ಸೆ.9ರಂದು ಬೆಳಿಗ್ಗೆ 8 ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಎಲ್ಲ ವರ್ಗದ ಅರ್ಹ ಅಭ್ಯರ್ಥಿಗಳು ₹10 ಸಾವಿರ ಠೇವಣಿ ಪಾವತಿಸುವುದಕ್ಕೂ ಮಂಗಳವಾರ ಬೆಳಿಗ್ಗೆ 8 ಗಂಟೆವರೆಗೆ ಸಮಯ ನೀಡಲಾಗಿದೆ. ಅಭ್ಯರ್ಥಿಗಳ ಕೋರಿಕೆ ಮೇರೆಗೆ ಸಮಯ ವಿಸ್ತರಣೆ ಮಾಡಿದ್ದು, ಈ ಅವಧಿಯೊಳಗೆ ಅಭ್ಯರ್ಥಿಗಳು ಠೇವಣಿ ಪಾವತಿಸಿ, ಆಯ್ಕೆಗಳನ್ನು ದಾಖಲಿಸಿಕೊಳ್ಳಬೇಕು. ಇದು ಕೊನೆಯ ಅವಕಾಶ. ಮತ್ತೆ ಸಮಯ ವಿಸ್ತರಣೆ ಮಾಡುವುದಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.