ADVERTISEMENT

‘ಲಾಕ್‌ಡೌನ್‌ನಿಂದ ಕೈಗಾರಿಕೆಗಳಿಗೆ ವಿನಾಯಿತಿ ನೀಡಿ’

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 17:10 IST
Last Updated 13 ಜುಲೈ 2020, 17:10 IST

ಬೆಂಗಳೂರು: ಕೋವಿಡ್‌ ನಿಯಂತ್ರಿಸುವ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್‌ ಘೋಷಿಸಿರುವ ರಾಜ್ಯಸರ್ಕಾರದ ನಿಲುವನ್ನು ಕರ್ನಾಟಕ ಮಾಲೀಕರು ಅಥವಾ ಉದ್ಯೋಗದಾತರ ಸಂಘ (ಕೆಇಎ) ಸ್ವಾಗತಿಸಿದೆ. ಆದರೆ, ಲಾಕ್‌ಡೌನ್‌ ನಿಯಮಗಳಿಂದ ಮುಖ್ಯವಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ವಿನಾಯಿತಿ ನೀಡಬೇಕು ಎಂದು ಅದು ಮನವಿ ಮಾಡಿದೆ.

‘ಈಗಾಗಲೇ ಲಾಕ್‌ಡೌನ್‌ನಿಂದ ಎಂಎಸ್‌ಎಂಇಗಳು ನಷ್ಟ ಅನುಭವಿಸಿವೆ. ಮತ್ತೊಮ್ಮೆ ಲಾಕ್‌ಡೌನ್‌ ಆದರೆ, ತೀರಾ ಸಂಕಷ್ಟಕ್ಕೆ ಸಿಲುಕಲಿವೆ. ಕೈಗಾರಿಕೆಗಳು ಎಲ್ಲ ಅಗತ್ಯ ಮುಂಜಾಗ್ರತಾ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಕಾರ್ಯಾಚರಣೆ ನಡೆಸಲಿವೆ. ಲಾಕ್‌ಡೌನ್‌ನಿಂದ ಕೈಗಾರಿಕೆಗಳಿಗೆ ವಿನಾಯಿತಿ ನೀಡಿದರೆ ಅನುಕೂಲವಾಗಲಿದೆ’ ಎಂದು ಸಂಘದ ಅಧ್ಯಕ್ಷ ಬಿ.ಸಿ. ಪ್ರಭಾಕರ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT