ADVERTISEMENT

ಅಕ್ರಮ ವಲಸಿಗರನ್ನು ಬಂಧನ ಕೇಂದ್ರದಲ್ಲೇ ಇರಿಸಿ: ಹೈಕೋರ್ಟ್ ಆದೇಶ

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 21:02 IST
Last Updated 8 ಜೂನ್ 2020, 21:02 IST
   

ಬೆಂಗಳೂರು: ’ನಿಗದಿತ ವೀಸಾ ಇಲ್ಲದೆ ರಾಜ್ಯದಲ್ಲಿ ನೆಲೆಸಿದ ವಿದೇಶಿಯರು ಹಾಗೂ ಅಕ್ರಮ ವಲಸಿಗರಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದ್ದರೆ ಅಂಥವರನ್ನು ಅವರ ಸ್ವಂತ ಸ್ಥಳಗಳಿಗೆ ಕಳುಹಿಸುವ ಅಥವಾ ನ್ಯಾಯಾಲಯದಿಂದ ಮುಂದಿನ ಆದೇಶ ಬರುವವರೆಗೂ ಡಿಟೆನ್ಷನ್ ಸೆಂಟರ್ ನಲ್ಲೇ (ಬಂಧನ ಕೇಂದ್ರ) ಇರಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.

ಜಾಮೀನು ಕೋರಿ ಈ ಬಾಬುಲ್ ಖಾನ್ ಹಾಗೂ ಥಾನಿಯಾ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್ ಈ ಆದೇಶ ನೀಡಿದೆ.

ಅಕ್ರಮ ವಲಸಿಗರು ಹಾಗೂ ವೀಸಾ ಇಲ್ಲದೆ ರಾಜ್ಯದಲ್ಲಿ ನೆಲೆಸಿರುವ ವಿದೇಶಿಯರ ಪ್ರಕರಣದಲ್ಲಿ ಅನುಸರಿಸಬೇಕಾದ ಹಲವು ಮಾರ್ಗಸೂಚಿಗಳನ್ನು ಹೈಕೋರ್ಟ್ ಇದೇ ವೇಳೆ ಹೊರಡಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.