ನಿರ್ಮಲಾನಂದನಾಥ ಸ್ವಾಮೀಜಿ
ಪೀಣ್ಯ ದಾಸರಹಳ್ಳಿ: ಭಾರತ ಯುವ ಕೇಂದ್ರದಿಂದ ಬಾಗಲಗುಂಟೆಯ ಶ್ರೀಸಾಯಿ ಕಲ್ಯಾಣ ಮಂಟಪದಲ್ಲಿ ಇದೇ 20ರಂದು ಸಂಜೆ 5 ಗಂಟೆಗೆ ಕೆಂಪೇಗೌಡ ಜಯಂತ್ಸವ ಮತ್ತು ನಾಡಪ್ರಭು ಕೆಂಪೇಗೌಡ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
‘ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ನಾಥ ಸ್ವಾಮೀಜಿ ಮತ್ತು ವಿಜಯನಗರ ಶಾಖ ಮಠದ ಪೀಠಾಧ್ಯಕ್ಷ ಸೌಮ್ಯನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವವರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಕೇಂದ್ರದ ಅಧ್ಯಕ್ಷ ವಿನೋದ್ ಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇಕಡಾ 95ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಕೆಂಪೇಗೌಡ ಪ್ರಶಸ್ತಿ ನೀಡಿ ಅಭಿನಂದಿಸಲಾಗುವುದು. ಇದೇ ವೇಳೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ' ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.