ADVERTISEMENT

ಕೆಂಪೇಗೌಡ ವಿಮಾನ ನಿಲ್ದಾಣ: ಅತ್ಯುತ್ತಮ ದೇಶೀಯ ಏರ್‌ಪೋರ್ಟ್ ಲಾಂಜ್ ಮನ್ನಣೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2024, 16:24 IST
Last Updated 18 ಡಿಸೆಂಬರ್ 2024, 16:24 IST
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ (ಬಿಐಎಎಲ್‌) 080 ಲಾಂಜ್‌
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ (ಬಿಐಎಎಲ್‌) 080 ಲಾಂಜ್‌   

ಬೆಂಗಳೂರು: ಟ್ರಾವೆಲ್ ಹಾಗೂ ಲೀಶರ್ ಇಂಡಿಯಾ ನೀಡುವ ‘ಅತ್ಯುತ್ತಮ ದೇಶೀಯ ಏರ್‌ಪೋರ್ಟ್ ಲಾಂಜ್’ ಮನ್ನಣೆಯನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಬಿಐಎಎಲ್‌) ಟರ್ಮಿನಲ್ 2ರಲ್ಲಿ ದೇಶೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ ಪಡೆದುಕೊಂಡಿದೆ.

ಇದಲ್ಲದೆ, ‘ಕಾಂಡೆ ನಾಸ್ಟ್ ರೀಡರ್ಸ್ ಚಾಯ್ಸ್ ಅವಾರ್ಡ್ಸ್‌ -2024’ರಲ್ಲಿ ಟರ್ಮಿನಲ್ 2ರಲ್ಲಿನ ಅಂತರರಾಷ್ಟ್ರೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ಗೆ ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಎಂಬ ಶೀರ್ಷಿಕೆಯ ಮನ್ನಣೆಯನ್ನು ನೀಡಲಾಗಿದೆ. 

‘ಟ್ರಾವೆಲ್’, ‘ಲೀಶರ್’ ಮತ್ತು ‘ಕಾಂಡೆ ನಾಸ್ಟ್ ಟ್ರಾವೆಲರ್’ ನಿಯತಕಾಲಿಕೆಗಳು ಪ್ರಯಾಣ ಮತ್ತು ಆತಿಥ್ಯ ಉದ್ಯಮದಲ್ಲಿನ ಅತ್ಯುತ್ತಮ ಸಂಸ್ಥೆಗಳನ್ನು ಓದುಗರ ಆಯ್ಕೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡುತ್ತವೆ. 

ADVERTISEMENT

ಪ್ರಯಾಣಿಕರಿಗೆ ಮೊದಲ ಆದ್ಯತೆಯಲ್ಲಿ ಉತ್ತಮ ಸೌಕರ್ಯ ಹಾಗೂ ವ್ಯವಸ್ಥೆಯೊಂದಿಗೆ ನಿರ್ಮಾಣವಾಗಿರುವ ಲಾಂಜ್‌ ಅನ್ನು ಇನ್ನಷ್ಟು ಪ್ರಯಾಣಿಕರ ಸ್ನೇಹಿಯಂತೆ ಕಾರ್ಯನಿರ್ವಹಿಸಲು ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಅನುಭವವನ್ನು ಇನ್ನಷ್ಟು ಉನ್ನತೀಕರಿಸಲು ಹಾಗೂ ಆತಿಥ್ಯದ ಹೊಸ ಮಾನದಂಡವನ್ನು ಹೆಚ್ಚಿಸಲು ಪ್ರಶಸ್ತಿ ಪ್ರೇರಣೆ ನೀಡಿದೆ ಎಂದು ಬಿಐಎಎಲ್‌ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರಿ ಮರಾರ್ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.