ADVERTISEMENT

₹2.18 ಕೋಟಿ ಮೌಲ್ಯದ ಹೈಡ್ರೊ ಗಾಂಜಾ ಜಪ್ತಿ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 14:35 IST
Last Updated 15 ಜನವರಿ 2026, 14:35 IST
<div class="paragraphs"><p> ಹೈಡ್ರೊ ಗಾಂಜಾ</p></div>

ಹೈಡ್ರೊ ಗಾಂಜಾ

   

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್‌ ಅಧಿಕಾರಿಗಳು, ವಿಮಾನದ ಮೂಲಕ ವಿದೇಶದಿಂದ ತರುತ್ತಿದ್ದ ₹2.18 ಕೋಟಿ ಮೌಲ್ಯದ ಹೈಡ್ರೊಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಬ್ಯಾಂಕಾಕ್‌ನ ಇಬ್ಬರನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಆಧರಿಸಿ ಟರ್ಮಿನಲ್-2ರಲ್ಲಿ ಕಾರ್ಯಾಚರಣೆ ನಡೆಸಿ, 6.24 ಕೆ.ಜಿ ಹೈಡ್ರೊಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಮಾದಕ ವಸ್ತು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ(ಎನ್‌ಡಿಪಿಎಸ್) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.