ADVERTISEMENT

ಕೆಂಪೇಗೌಡರ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 17:53 IST
Last Updated 6 ಜುಲೈ 2019, 17:53 IST
ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಡಿ.ಹನುಮಂತಯ್ಯ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬೆಂಗಳೂರು ದಕ್ಷಿಣ ತಾಲ್ಲೂಕು ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಪುಟ್ಟೇಗೌಡ, ಬೆಂಗಳೂರು ದಕ್ಷಿಣ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ.ದೇವರಾಜು, ಸಂಘದ ಅಧ್ಯಕ್ಷ ಎಚ್.ಎನ್. ಮುನಿಭೈರಪ್ಪ, ಬಸವರಾಜು, ಗಿರಿಧರ್, ಹೇಮ, ಶಿವಕುಮಾರ್, ಜಯರಾಮು ಇದ್ದಾರೆ

ರಾಜರಾಜೇಶ್ವರಿನಗರ: ‘ಕಸುಬಿಗೆ ತಕ್ಕಂತೆ ಪೇಟೆ, ಪಂಥಗಳಿಗೆ ತಕ್ಕಂತೆ ಗುಡಿಗೋಪುರ, ವಸತಿಗೆ ತಕ್ಕಂತೆ ಕೆರೆ–ಕುಂಟೆಗಳನ್ನು ನಿರ್ಮಿಸಿ ಮಾದರಿ ನಗರ ನಿರ್ಮಾಣಕ್ಕೆ ಕಾರಣರಾದ ನಾಡಪ್ರಭು ಕೆಂಪೇಗೌಡರಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸು
ವಂತದ್ದು’ ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಪುಟ್ಟೇಗೌಡ ಹೇಳಿದರು.

ಬೆಂಗಳೂರು ದಕ್ಷಿಣ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ದೊಡ್ಡಕಲ್ಲಸಂದ್ರ ಬಳಿಯ ನಾರಾಯಣನಗರದಲ್ಲಿ ಏರ್ಪಡಿಸಿದ್ದ 509ನೇ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದರು. ಎಲ್ಲಾ ಸಮುದಾಯದವರು ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ’ ಎಂದರು.

ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಡಿ.ಹನುಮಂತಯ್ಯ ‌ಮಾತನಾಡಿ, ‘ಧಾರ್ಮಿಕ, ಸಾಂಸ್ಕೃತಿಕ, ಜಾನಪದ ಕಲೆಗಳ ಬೆಳೆವಣಿಗೆ ಜೊತೆಗೆ
ಎಲ್ಲಾ ಸಮುದಾಯದವರಿಗೆ ಅಧಿಕಾರ,ಶಿಕ್ಷಣ, ಸವಲತ್ತನ್ನು ನಾಡಪ್ರಭು ಕೆಂಪೇಗೌಡರು ನೀಡಿದ್ದರು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.