ADVERTISEMENT

ಕೆಂಪೇಗೌಡ ಜಯಂತಿ: ಪ್ರಶಸ್ತಿಗೆ ಆಯ್ಕೆ ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2022, 19:50 IST
Last Updated 8 ನವೆಂಬರ್ 2022, 19:50 IST
ತುಷಾರ್‌ ಗಿರಿನಾಥ್‌
ತುಷಾರ್‌ ಗಿರಿನಾಥ್‌   

ಬೆಂಗಳೂರು: ‘ಕೆಂಪೇಗೌಡ ಜಯಂತಿಯನ್ನು ಬಿಬಿಎಂಪಿ ವತಿಯಿಂದ ಇದೇ ನವೆಂಬರ್‌ ತಿಂಗಳ ಒಳಗೆ ಸಂಭ್ರಮದಿಂದ ಆಚರಿಸಲಾಗುವುದು’ ಎಂದು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

‘ಕೋವಿಡ್‌ ಕಾರಣದಿಂದ ಎರಡು ವರ್ಷಗಳಿಂದ ಬಿಬಿಎಂಪಿ ವತಿಯಿಂದ ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಿರಲಿಲ್ಲ. ಈ ವರ್ಷ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಯಂತಿ ಅಂಗವಾಗಿ ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು.ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗುವುದು. ಇದಕ್ಕಾಗಿ ಆಯ್ಕೆ ಸಮಿತಿ ರಚಿಸಲಾಗಿದೆ’ ಎಂದು ಮಂಗಳವಾರ ತಿಳಿಸಿದರು.

’ಕೆಂಪೇಗೌಡ ಜಯಂತಿ ಆಚರಣೆಯ ದಿನಾಂಕವನ್ನು ಸದ್ಯದಲ್ಲೇ ನಿಗದಿಪಡಿಸಲಾಗುವುದು. ಪ್ರಶಸ್ತಿಗೆ ಸಲ್ಲಿಸಿರುವ ಅರ್ಜಿಗಳಲ್ಲಿ ಪರಿಶೀಲಿಸಿ ಅರ್ಹ ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು. ಈಗಾಗಲೇ ಕಳೆದ ಮಾರ್ಚ್‌ ತಿಂಗಳಲ್ಲಿ ಸಭೆಯಾಗಿದೆ. ಪ್ರಶಸ್ತಿ ಸಮಿತಿಯು ಎಷ್ಟು ಜನರಿಗೆ ಪ್ರಶಸ್ತಿ ನೀಡುವ ಬಗ್ಗೆ ತೀರ್ಮಾನಿಸಲಿದೆ’ ಎಂದರು.

ADVERTISEMENT

‘ಪ್ರಶಸ್ತಿಗೆ ಮಹತ್ವ, ಘನತೆ ಇರುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದವರಿಗೆ ಪ್ರಶಸ್ತಿ ನೀಡಲಾಗುವುದು. 2022ರ ಮಾರ್ಚ್‌ನಲ್ಲಿ ಬೇರೆ ಬೇರೆ ಸಮಿತಿ ರಚಿಸಲಾಗಿದೆ. ಜಯಂತಿಗಾಗಿ ನಿರ್ದಿಷ್ಟ ಅನುದಾನ ಮೀಸಲಿಟ್ಟಿಲ್ಲ. ಎಷ್ಟು ಜನರಿಗೆ ಪ್ರಶಸ್ತಿ, ನಗದು ನೀಡಬೇಕು ಎನ್ನುವ ಬಗ್ಗೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.

‘ನಮ್ಮ ಕ್ಲಿನಿಕ್‌ಗಳನ್ನು ಇದೇ ತಿಂಗಳಲ್ಲಿ ಆರಂಭಿಸಬೇಕು ಎನ್ನುವ ಉದ್ದೇಶದಿಂದ ಈಗಾಗಲೇ ಅಧಿಕಾರಿಗಳ ಜತೆ ಸಭೆ ಮಾಡಲಾಗಿದೆ’ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.