ADVERTISEMENT

ಕೆಂಪೇಗೌಡರ ಪ್ರತಿಮೆ ಶೀಘ್ರವೇ ಅನಾವರಣ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2022, 20:35 IST
Last Updated 24 ಜೂನ್ 2022, 20:35 IST
ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿರುವ ಕೆಂಪೇಗೌಡರ ಕಂಚಿನ ಪುತ್ಥಳಿ ಕಾಮಗಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಶೀಲಿಸಿದರು. ಸಚಿವ ಡಾ.ಅಶ್ವತ್ಥನಾರಾಯಣ, ಶಾಸಕ ರಾಜೂ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿರುವ ಕೆಂಪೇಗೌಡರ ಕಂಚಿನ ಪುತ್ಥಳಿ ಕಾಮಗಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಶೀಲಿಸಿದರು. ಸಚಿವ ಡಾ.ಅಶ್ವತ್ಥನಾರಾಯಣ, ಶಾಸಕ ರಾಜೂ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.   

ಬೆಂಗಳೂರು: ಕೆಂಪೇಗೌಡ ಅಂತರ ರಾಷ್ಟ್ರೀಯವಿಮಾನನಿಲ್ದಾಣದ ಟರ್ಮಿನಲ್‌–2 ಉದ್ಘಾಟನೆಯ ಸಂದರ್ಭದಲ್ಲೇ ನಾಡಪ್ರಭು ಕೆಂಪೇ ಗೌಡರ ಕಂಚಿನ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದೆಹಲಿಯಿಂದ ಶುಕ್ರವಾರ ರಾತ್ರಿ ಹಿಂದಿರುಗಿದ ಅವರು ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಕೆಂಪೇಗೌಡರ ಬೃಹತ್‌ ಪ್ರತಿಮೆಯ ಸ್ಥಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

‘ಪ್ರತಿಮೆ ನಿರ್ಮಾಣ ಕಾರ್ಯ ಅಂತಿಮಘಟ್ಟಕ್ಕೆ ಬಂದಿದೆ. ಉಕ್ಕು ಮತ್ತು ಕಂಚಿನಿಂದ ಮಾಡಲಾಗಿರುವ ಸುಮಾರು 108 ಅಡಿ ಎತ್ತರದ ಪ್ರತಿಮೆ 220 ಟನ್‌ ತೂಕವಿದೆ. ಕೆಂಪೇಗೌಡರ ಇಷ್ಟು ದೊಡ್ಡ ಪ್ರತಿಮೆ ಇನ್ನೆಲ್ಲಿಯೂ ಇಲ್ಲ. ಇದರ ಜೊತೆಗೆ ಸುತ್ತಲಿನ ಪ್ರದೇಶದ ಸೌಂದರ್ಯೀಕರಣವನ್ನೂ ಮಾಡಲಾಗುತ್ತಿದೆ. ಆದಷ್ಟೂ ಶೀಘ್ರದಲ್ಲಿ ಇದರ ಅನಾವರಣ ಮಾಡಬೇಕೆನ್ನು
ವುದು ನಮ್ಮೆಲ್ಲರ ಆಶಯ’ ಎಂದರು.

ADVERTISEMENT

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಶಾಸಕ ರಾಜುಗೌಡ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.