ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’ಗೆ ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಆಯ್ಕೆಯಾಗಿದ್ದಾರೆ.
ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈ ಪ್ರಶಸ್ತಿ ಸ್ಥಾಪಿಸಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ.
ಯು.ಟಿ. ಖಾದರ್ ಅವರು ಕರ್ನಾಟಕದ ಸಾಂಸ್ಕೃತಿಕ ಲೋಕಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಹಿಂದೆ ಆರೋಗ್ಯ ಹಾಗೂ ವಸತಿ ಸಚಿವರಾಗಿ ಕಾರ್ಯ ನಿರ್ವಹಿಸುವಾಗಲೂ ಜನಪರ ಚಿಂತನೆಗಳನ್ನು ಹೊಂದಿದ್ದರು. ಪ್ರಸ್ತುತ ವಿಧಾನಸಭೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಹಲವು ಮಹತ್ವದ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ಇತ್ತೀಚೆಗೆ ಯಶಸ್ವಿಯಾಗಿ ನಡೆದ ‘ಪುಸ್ತಕ ಮೇಳ’ ಅದಕ್ಕೆ ಉದಾಹರಣೆ ಎಂದು ಕಸಾಪ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.