ADVERTISEMENT

ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್‌ಗಳ ಕಳ್ಳತನ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 16:44 IST
Last Updated 2 ನವೆಂಬರ್ 2021, 16:44 IST
ಆರೋಪಿಯಿಂದ ಜಪ್ತಿ ಮಾಡಿರುವ ಬೈಕ್‌ಗಳು 
ಆರೋಪಿಯಿಂದ ಜಪ್ತಿ ಮಾಡಿರುವ ಬೈಕ್‌ಗಳು    

ಬೆಂಗಳೂರು: ಮನೆ ಮುಂದೆ ನಿಲ್ಲಿಸಿರುತ್ತಿದ್ದ ಬೈಕ್‌ಗಳನ್ನು ಕದ್ದು ಬೇರೆಡೆ ಮಾರಾಟ ಮಾಡುತ್ತಿದ್ದನದೀಂ ಅಹ್ಮದ್‌ ಎಂಬಾತನನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ ₹5.20 ಲಕ್ಷ ಮೌಲ್ಯದ ನಾಲ್ಕು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

‘ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಹೋಂಡಾ ಆ್ಯಕ್ಟಿವಾ ಸ್ಕೂಟರ್‌ ಕಳವಾಗಿರುವ ಬಗ್ಗೆ ವ್ಯಕ್ತಿಯೊಬ್ಬರು ಠಾಣೆಗೆ ದೂರು ನೀಡಿದ್ದರು. ಠಾಣಾ ವ್ಯಾಪ್ತಿಯಲ್ಲಿ ನದೀಂ ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಸ್ತಿನಲ್ಲಿದ್ದ ಸಿಬ್ಬಂದಿ ಗಮನಿಸಿದ್ದರು. ಅಕ್ಟೋಬರ್‌ 31ರಂದು ಆತನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ತಾನೆ ಬೈಕ್‌ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.

‘ದರೋಡೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಒಂದೂವರೆ ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ. ಬಳಿಕ ಬೈಕ್‌ ಕಳ್ಳತನಕ್ಕೆ ಮುಂದಾಗಿದ್ದ. ಕದ್ದ ಬೈಕ್‌ಗಳನ್ನು ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿದ್ದ. ಕೆಂಗೇರಿಯಲ್ಲಿ ಎರಡು, ಬ್ಯಾಡರಹಳ್ಳಿ ಹಾಗೂ ಜಿಗಣಿ ಠಾಣೆಗಳ ವ್ಯಾಪ್ತಿಯಲ್ಲಿ ತಲಾ ಒಂದು ಬೈಕ್‌ ಕದ್ದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.