ADVERTISEMENT

ಬೆಂಗಳೂರು ದಕ್ಷಿಣ ಗ್ರಾ.ಪಂ.ಗಳ ಮೀಸಲಾತಿ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 17:13 IST
Last Updated 24 ಜನವರಿ 2021, 17:13 IST

ಕೆಂಗೇರಿ: ಬೆಂಗಳೂರು ದಕ್ಷಿಣ ವಿಭಾಗದ ಯಶವಂತಪುರ ಕ್ಷೇತ್ರ ವ್ಯಾಪ್ತಿಯ 16 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕಾಗಿ 30 ತಿಂಗಳ ಮೊದಲನೇ ಅವಧಿಗೆ ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ.

ಕುಂಬಳಗೋಡು, ರಾಮೋಹಳ್ಳಿ, ಅಜ್ಜನಹಳ್ಳಿ, ಪಂಚಾಯಿತಿ ಅಧ್ಯಕ್ಷ ಸ್ಥಾನಗಳು ಎಸ್.ಸಿ ಮಹಿಳೆಗೆ ಮೀಸಲಾದರೆ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಅಭ್ಯರ್ಥಿಗಳಿಗೆ ಒದಗಿ ಬಂದಿದೆ. ತಾವರೆಕೆರೆ ಹಾಗೂ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಅಭ್ಯರ್ಥಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲಾಗಿದೆ.

ಚೋಳನಾಯಕನಹಳ್ಳಿ ಹಾಗೂ ತರಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿಗೆ ದೊರಕಿದೆ. ಕೆ.ಗೊಲ್ಲಹಳ್ಳಿ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಅಭ್ಯರ್ಥಿಗೆ ದಕ್ಕಿದೆ. ನೆಲಗುಳಿ ಅಧ್ಯಕ್ಷ ಸ್ಥಾನ ಎಸ್ ಸಿ ವರ್ಗಕ್ಕೆ ಮೀಸಲಾದರೆ ಉಪಾಧ್ಯಕ್ಷ ಸ್ಥಾನ ಪ್ರವರ್ಗ ‘ಎ’ ವರ್ಗಕ್ಕೆ ಲಭಿಸಿದೆ. ಚನ್ನೇನಹಳ್ಳಿ ಅಧ್ಯಕ್ಷ ಸ್ಥಾನ ಎಸ್.ಸಿ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ ಕೆಟಗರಿ ಎ ಮಹಿಳೆಗೆ ದೊರಕಿದೆ.

ADVERTISEMENT

ಅಗರ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್.ಸಿ ಮಹಿಳೆ, ಚಿಕ್ಕನಹಳ್ಳಿ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್.ಟಿ ಮಹಿಳೆಗೆ ಒದಗಿ ಬಂದಿದೆ. ಉಳಿದಂತೆ ಚುಂಚನಕುಪ್ಪೆ ಅಧ್ಯಕ್ಷ ಸ್ಥಾನ ಪ್ರವರ್ಗ ‘ಎ’ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್. ಸಿ ಮಹಿಳೆ, ಸೂಲಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಪ್ರವರ್ಗ ಎ ಮಹಿಳಾ ಅಭ್ಯರ್ಥಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ದೊರಕಿದೆ. ಕಗ್ಗಲೀಪುರ ಅಧ್ಯಕ್ಷ ಸ್ಥಾನ ಸಾಮಾನ್ಯ ಅಭ್ಯರ್ಥಿ , ಉಪಾಧ್ಯಕ್ಷ ಸ್ಥಾನ ಎಸ್.ಸಿ ಮಹಿಳೆಗೆ ಮೀಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.