
ಬಂಧನ
ಬೆಂಗಳೂರು: ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸುರೇಶ್ ಅಲಿಯಾಸ್ ಸೂರಿ, ಶಶಿಕುಮಾರ್ ಮತ್ತು ಅಖಿಲ್ ಬಂಧಿತರು. ಡಿ.31ರಂದು ವ್ಯಕ್ತಿ
ಯೊಬ್ಬರನ್ನು ಆರೋಪಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ
₹1 ಲಕ್ಷ ದೋಚಿ ಪರಾರಿಯಾಗಿದ್ದರು. ಹಣ ಕಳೆದುಕೊಂಡವರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಬಂಧಿತರು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹಾಗೂ ನಗರದೊಳಗೆ ರಾತ್ರಿ ವೇಳೆ ವಾಹನ ಸವಾರರನ್ನು ಅಡ್ಡಗಟ್ಟಿ ದರೋಡೆ ನಡೆಸುತ್ತಿದ್ದರು. ಸೂರ್ಯಸಿಟಿ, ಮಾದನಾಯಕನಹಳ್ಳಿ, ಹೆಬ್ಬಗೋಡಿ, ಬ್ಯಾಡರಹಳ್ಳಿ ಸೇರಿದಂತೆ ಹಲವು ಠಾಣೆಗಳ ವ್ಯಾಪ್ತಿಯಲ್ಲಿ ದರೋಡೆ ಮಾಡಿದ್ದರು. ಬ್ಯಾಡರಹಳ್ಳಿಯಲ್ಲಿ ಲಾರಿ ಚಾಲಕನಿಂದ ಹಾಗೂ ಮಾದನಾಯಕನಹಳ್ಳಿಯಲ್ಲಿ ವಕೀಲರಿಂದ ಹಣ ಸುಲಿಗೆ ಮಾಡಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ.
2025ರ ಸೆಪ್ಟೆಂಬರ್‌ನಲ್ಲಿ ಮೂವರು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ನಂತರ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಗಳು, ಮತ್ತೆ ಅದೇ ಕೃತ್ಯಕ್ಕೆ ಇಳಿದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.