ADVERTISEMENT

ಜ.17ಕ್ಕೆ ಕೆಎಫ್‌ಸಿಎಸ್‌ಸಿ ಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 17:20 IST
Last Updated 12 ಜನವರಿ 2022, 17:20 IST

ಬೆಂಗಳೂರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ (ಕೆಎಫ್‌ಸಿಎಸ್‌ಸಿ) ಗೋದಾಮುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಗುರುತಿನ ಚೀಟಿ, ರಜೆ ಸೇರಿದಂತೆ ವಿವಿಧ ಸವಲತ್ತುಗಳಿಗೆ ಆಗ್ರಹಿಸಿಕೆಎಫ್‌ಸಿಎಸ್‌ಸಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕಾರ್ಮಿಕರ ಒಕ್ಕೂಟವು ಇದೇ 17ರಂದು ರಾಜ್ಯದ ಎಲ್ಲಗೋದಾಮುಗಳ ಎದುರು ಪ್ರತಿಭಟನೆ ಹಮ್ಮಿಕೊಂಡಿದೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಜಿ.ಆರ್.ಶಿವಶಂಕರ್,‘ರಾಜ್ಯದಲ್ಲಿರುವ ಕೆಎಫ್‌ಸಿಎಸ್‌ಸಿ 191 ಗೋದಾಮುಗಳಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆದರೆ, ಕಾರ್ಮಿಕರಿಗೆ ಸಿಗಬೇಕಿರುವ ಕನಿಷ್ಠ ಸವಲತ್ತುಗಳನ್ನು ಈವರೆಗೆ ನೀಡಿಲ್ಲ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT