ADVERTISEMENT

ಬೆಂಗಳೂರು | ಡಿ.ಜೆ.ಹಳ್ಳಿ ಗಲಭೆಗೆ ಸಂಬಂಧಿಸಿ 110 ಆರೋಪಿಗಳ ಬಂಧನ

ಶಾಂತಿ ಕಾಪಾಡಲು ಪೊಲೀಸ್ ಕಮಿಷನರ್ ಮನವಿ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 7:24 IST
Last Updated 12 ಆಗಸ್ಟ್ 2020, 7:24 IST
ಕಾವಲ್ ಬೈಸಂದ್ರದಲ್ಲಿ ಗಲಭೆಯಲ್ಲಿ ಹಾನಿಗೊಂಡ ವಾಹನಗಳು - ಪ್ರಜಾವಾಣಿ ಚಿತ್ರ/ಎಂಎಸ್ ಮಂಜುನಾಥ್
ಕಾವಲ್ ಬೈಸಂದ್ರದಲ್ಲಿ ಗಲಭೆಯಲ್ಲಿ ಹಾನಿಗೊಂಡ ವಾಹನಗಳು - ಪ್ರಜಾವಾಣಿ ಚಿತ್ರ/ಎಂಎಸ್ ಮಂಜುನಾಥ್   

ಬೆಂಗಳೂರು: ನಗರದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್‌ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿದ ಆರೋಪಿ ನವೀನ್‌ನನ್ನು ದಸ್ತಗಿರಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್‌ನನ್ನು ದಸ್ತಗಿರಿ ಮಾಡಲಾಗಿದೆ. ಜೊತೆಗೆ ಬೆಂಕಿ ಹಚ್ಚಿದ, ಕಲ್ಲು ತೂರಾಟ ನಡೆಸಿದ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ ಇತರೆ 110 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನಗರದಲ್ಲಿ ಶಾಂತಿ ಕಾಪಾಡಲು ಎಲ್ಲರೂ ಪೊಲೀಸರೊಂದಿಗೆ ಸಹಕರಿಸಬೇಕಾಗಿ ವಿನಂತಿ’ ಎಂದು ಕಮಲ್ ಪಂತ್ ಟ್ವೀಟ್ ಮಾಡಿದ್ದಾರೆ.

ರಾತ್ರಿ ನಡೆದ ಗಲಭೆಯಲ್ಲಿ ಪೊಲೀಸರ ಗುಂಡೇಟಿಗೆ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದರು. ‘ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಲಾಗಿದೆ’ ಎಂದು ಆರೋಪಿಸಿದ 500ಕ್ಕೂ ಹೆಚ್ಚು ಜನರು ಗಲಭೆ ನಡೆಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.