
ಪ್ರಜಾವಾಣಿ ವಾರ್ತೆ
ಬೆಂಗಳೂರು: ದ್ವಿಚಕ್ರ ವಾಹನ, ಮೊಬೈಲ್ ಹಾಗೂ ಲ್ಯಾಪ್‌ಟಾಪ್ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಕೆಂಪೇಗೌಡ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ರಾಮೋಹಳ್ಳಿ ವಿನಾಯಕನಗರದ ನಾಗರಾಜು ಅಲಿಯಾಸ್ ಚೇತು (19), ಮೆಜೆಸ್ಟಿಕ್‌ನ ರವಿ ಅಲಿಯಾಸ್ ಮಾಡು (29) ಹಾಗೂ ಕೆ.ಆರ್. ಮಾರ್ಕೆಟ್‌ನ ಮಹಮ್ಮದ್ ಸಾದಿಕ್ (26) ಬಂಧಿತರು. ಇವರಿಂದ ₹ 5 ಲಕ್ಷ ದ್ವಿಚಕ್ರ ವಾಹನ, 2 ಲ್ಯಾಪ್‌ಟಾಪ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದನ್ನು ಆರೋಪಿಗಳು ಕಳ್ಳತನ ಮಾಡಿದ್ದರು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದ್ದರು. ಮೂವರು ಆರೋಪಿಗಳು, ತಮ್ಮದೇ ತಂಡ ಕಟ್ಟಿಕೊಂಡಿದ್ದರು. ನಗರದಲ್ಲಿ ಸುತ್ತಾಡಿ ಕೃತ್ಯ ಎಸಗುತ್ತಿದ್ದರು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.