ADVERTISEMENT

ಪತ್ರಕರ್ತ ಕೂಡ್ಲಿ ಗುರುರಾಜಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರದಾನ

ಒಳ್ಳೆಯ ಕೆಲಸ ಗುರುತಿಸುವ ಪತ್ರಿಕೆ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 14 ಜೂನ್ 2025, 15:42 IST
Last Updated 14 ಜೂನ್ 2025, 15:42 IST
<div class="paragraphs"><p>ನಗರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ ಕೂಡ್ಲಿ ಗುರುರಾಜ ಅವರಿಗೆ ‘ಖಾದ್ರಿ ಶಾಮಣ್ಣ ಪತ್ರಿಕೋದ್ಯಮ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ವೂಡೇ ಪಿ. ಕೃಷ್ಣ, ಬಸವರಾಜ ಬೊಮ್ಮಾಯಿ, ಮೀರಾಸಾಬಿಹಳ್ಳಿ ಶಿವಣ್ಣ, ಕೆ.ವಿ. ನಾಗರಾಜ್, ಎಚ್. ಆರ್. ಶ್ರೀಶ ಉಪಸ್ಥಿತರಿದ್ದರು&nbsp; </p></div>

ನಗರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ ಕೂಡ್ಲಿ ಗುರುರಾಜ ಅವರಿಗೆ ‘ಖಾದ್ರಿ ಶಾಮಣ್ಣ ಪತ್ರಿಕೋದ್ಯಮ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ವೂಡೇ ಪಿ. ಕೃಷ್ಣ, ಬಸವರಾಜ ಬೊಮ್ಮಾಯಿ, ಮೀರಾಸಾಬಿಹಳ್ಳಿ ಶಿವಣ್ಣ, ಕೆ.ವಿ. ನಾಗರಾಜ್, ಎಚ್. ಆರ್. ಶ್ರೀಶ ಉಪಸ್ಥಿತರಿದ್ದರು 

   

-ಪ್ರಜಾವಾಣಿ ಚಿತ್ರ

ಬೆಂಗಳೂರು: ‘ರಾಜಕೀಯ ಸುದ್ದಿ ಇಲ್ಲದಿದ್ದರೆ ಪತ್ರಿಕೆ ಆಕರ್ಷಕವಾಗಿರುವುದಿಲ್ಲ. ಅದೇ ರೀತಿ ರಾಜಕಾರಣಿಯ ಸುದ್ದಿಗಳು ಪತ್ರಿಕೆಯಲ್ಲಿ ಬರದಿದ್ದರೆ ಆ ರಾಜಕಾರಣಿಗೆ ಅಸ್ತಿತ್ವವೇ ಇರುವುದಿಲ್ಲ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ADVERTISEMENT

ನಗರದಲ್ಲಿ ಶನಿವಾರ ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ಏರ್ಪಡಿಸಿದ್ದ ಸಮಾರಂಭದಲ್ಲಿ ಪತ್ರಕರ್ತ ಕೂಡ್ಲಿ ಗುರುರಾಜ ಅವರಿಗೆ ‘ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದರು.

‘ಪತ್ರಿಕೋದ್ಯಮ ಬಹಳ ಪ್ರಭಾವಶಾಲಿ ಉದ್ಯಮ, ಪ್ರಜಾಪ್ರಭುತ್ವದಲ್ಲಿ ಜಾಗೃತವಾಗಿ ಇರುವುದು ಎಷ್ಟು ಮುಖ್ಯವೋ, ಜನ ಸಮುದಾಯದ ಪರ ಕೆಲಸ ಮಾಡುವುದು ಅಷ್ಟೇ ಮುಖ್ಯ. ಅದನ್ನು ಪತ್ರಿಕೋದ್ಯಮ ಮಾಡುತ್ತದೆ ಎಂಬ ವಿಶ್ವಾಸ ಇದೆ’ ಎಂದು ತಿಳಿಸಿದರು. 

‘ಅದು, ನಮ್ಮ ಸರ್ಕಾರ ಬದಲಾಗುವ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಮಯ. ಆಗ, ನಾನು ಕೇಂದ್ರದಿಂದ ಏಳು ನೀರಾವರಿ ಯೋಜನೆಗಳಿಗೆ ಅನುಮತಿ ಪಡೆದಿದ್ದೆ, ಅದನ್ನು ಪತ್ರಕರ್ತ ಉಮಾಪತಿ ಅವರು ಸರ್ಕಾರ ಬೀಳುವ ಸಂದರ್ಭದಲ್ಲಿಯೂ ಸಚಿವರು ನೀರಾವರಿ ಯೋಜನೆಗಳಿಗೆ ಅನುಮತಿ ಪಡೆದಿದ್ದಾರೆ ಎಂಬ ವಿಶ್ಲೇಷಣಾತ್ಮಕ ಲೇಖನ ಬರೆದಿದ್ದರು. ಒಳ್ಳೆಯ ಕೆಲಸ ಮಾಡಿದರೆ ಪತ್ರಿಕೆಯವರು ಗುರುತಿಸುತ್ತಾರೆ’ ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿದ ಕೂಡ್ಲಿ ಗುರುರಾಜ ಅವರು ತಮ್ಮ ವೃತ್ತಿಜೀವನದ ಅನುಭವಗಳನ್ನು ಹಂಚಿಕೊಂಡರು. ಹಾಗೆಯೇ, ಪ್ರಶಸ್ತಿಯೊಂದಿಗೆ ನೀಡಿದ್ದ ₹15 ಸಾವಿರ ಮೊತ್ತದ ಚೆಕ್‌ ಅನ್ನು ಟ್ರಸ್ಟ್‌ಗೆ ನೀಡಿ, ಟ್ರಸ್ಟ್‌ ಏಳಿಗೆಗೆ ಬಳಸಿಕೊಳ್ಳುವಂತೆ ಮನವಿ ಮಾಡಿದರು.

ಜಾನಪದ ವಿದ್ವಾಂಸ ಮೀರಾಸಾಬಿಹಳ್ಳಿ ಶಿವಣ್ಣ ಮಾತನಾಡಿದರು. ಕಾರ್ಯಕ್ರಮದಲ್ಲಿ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ. ಕೃಷ್ಣ, ಅಸ್ಸಾಂ ಕೇಂದ್ರಿಯ ವಿಶ್ವವಿದ್ಯಾಲಯದ ನಿವೃತ್ತ ಸಮ ಕುಲಪತಿ ಪ್ರೊ. ಕೆ.ವಿ. ನಾಗರಾಜ್‌ ಮಾತನಾಡಿದರು. ಟ್ರಸ್ಟ್‌ ಅಧ್ಯಕ್ಷ ಎಚ್. ಆರ್. ಶ್ರೀಶ ಹಾಜರಿದ್ದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.