ADVERTISEMENT

ಪ್ರಿಯಾಂಕ್ ಖರ್ಗೆ ವಜಾಕ್ಕೆ ಬಿಜೆಪಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಜನವರಿ 2019, 19:59 IST
Last Updated 23 ಜನವರಿ 2019, 19:59 IST

ಬೆಂಗಳೂರು: ಸಿದ್ಧಗಂಗಾ ಶ್ರೀಗಳ ಅಂತ್ಯಕ್ರಿಯೆ ನಡೆಯುತ್ತಿದ್ದಾಗಲೇ ಐಷಾರಾಮಿ ಹೋಟೆಲ್‌ನಲ್ಲಿ ವಿಚಾರಸಂಕಿರಣ ನಡೆಸಲು ಹಟ ಹಿಡಿದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿದೆ.

‘ಸರ್ಕಾರಿ ರಜೆ ಘೋಷಿಸಿ, ಶೋಕಾಚರಣೆಗೆ ಕರೆಕೊಟ್ಟು ಸರ್ಕಾರ ಸುತ್ತೋಲೆ ಹೊರಡಿಸಿದಾಗ ಸಂವಿಧಾನದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಸಲಾಗಿದೆ. ಒಮ್ಮೆ ನಿಲ್ಲಿಸಿದಂತೆ ಮಾಡಿ ಪುನಃ ಗೋಷ್ಠಿಗಳನ್ನು ಮಾಡಲಾಗಿದೆ’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತು ಪರಿಷತ್ ಸದಸ್ಯ ನಾರಾಯಣಸ್ವಾಮಿ ಆರೋಪಿಸಿದರು.

ಜೆಡಿಎಸ್ ಕೂಡ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಶೋಕಾಚರಣೆ ಇರುವಾಗ ಸರ್ಕಾರಿ ಕಾರ್ಯಕ್ರಮ ಮಾಡಿದ್ದು ಸರಿಯಲ್ಲ ಎಂದಿದೆ.

ADVERTISEMENT

ಕಾಂಗ್ರೆಸ್‌ನಲ್ಲೂ ಟೀಕೆ ವ್ಯಕ್ತವಾ ಗಿದ್ದು, ಸಚಿವರ ಹಟ ಸರಿಯಲ್ಲ. ಇದು ಪಕ್ಷಕ್ಕೆ ಕಪ್ಪುಚುಕ್ಕೆ. ಸರ್ಕಾರದ ಆದೇಶ ಧಿಕ್ಕರಿಸಿದ್ದು ಸರಿಯಲ್ಲ ಎಂದು ಕೆಲ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.