ಬೆಂಗಳೂರು: ಎಂಎಸ್‌ಐಎಲ್ ಅಧ್ಯಕ್ಷ ಸ್ಥಾನ ನಿರಾಕರಿಸಿರುವ ಶಾಸಕ ಮಹೇಶ್ ಕುಮಠಳ್ಳಿ ಜತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದಾರೆ.
ತಮ್ಮ ವಿದ್ಯಾರ್ಹತೆಗೆ ತಕ್ಕ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿರುವ ಕುಮಠಳ್ಳಿ, ಕೆಆರ್‌ಡಿಎಲ್ ಅಥವಾ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಯಡಿಯೂರಪ್ಪ ಒಂದೆರಡು ದಿನಗಳಲ್ಲಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.