ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಕೆಲಸ ಕೊಡಿಸುವ ಆಮಿಷವೊಡ್ಡಿ ₹ 8 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಸ್ಥಳೀಯ ನಿವಾಸಿಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ರಾಘವೇಂದ್ರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಸಿವಿಲ್ ಎಂಜಿನಿಯರ್ ಆಗಿರುವ ದೂರುದಾರ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. 2020ರ ಡಿಸೆಂಬರ್‌ನಲ್ಲಿ ಅವರಿಗೆ ಆರೋಪಿ ಪರಿಚಯವಾಗಿತ್ತು. ವಿಮಾನ ನಿಲ್ದಾಣದಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿದ್ದ ಆರೋಪಿ, ಹಂತ ಹಂತವಾಗಿ ₹ 8 ಲಕ್ಷ ಪಡೆದಿದ್ದ. ಅದಾದ ನಂತರ ಯಾವುದೇ ಕೆಲಸ ಕೊಡಿಸಿಲ್ಲ’ ಎಂದೂ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.