ADVERTISEMENT

‘ಅಜಿತಾಬ್‌ ನಾಪತ್ತೆ ಪ್ರಕರಣ: ಸಿಬಿಐಗೆ ವಹಿಸಿ’

​ಪ್ರಜಾವಾಣಿ ವಾರ್ತೆ
Published 29 ಜೂನ್ 2018, 12:37 IST
Last Updated 29 ಜೂನ್ 2018, 12:37 IST
   

ಬೆಂಗಳೂರು:‌‘ಸಾಫ್ಟ್‌ವೇರ್ ಎಂಜಿನಿಯರ್ ಕುಮಾರ್‌ಅಜಿತಾಬ್‌ ನಾಪತ್ತೆ ಆಗಿ ಹಲವು ತಿಂಗಳಾಗಿದ್ದು, ಪೊಲೀಸರು ಇದುವರೆಗೂ ಪತ್ತೆ ಹಚ್ಚಿಲ್ಲ. ಈ ಪ್ರಕರಣವನ್ನುರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು’ ಎಂದು ತಂದೆ ಅಶೋಕ್‌ ಕುಮಾರ್‌ ಸಿನ್ಹಾ ಆಗ್ರಹಿಸಿದರು.


ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘2017ರ ಡಿಸೆಂಬರ್ 18ರ ಸಂಜೆ 6.30ಕ್ಕೆ ಕುಮಾರ ಅಜಿತಾಬ್‌ ನಾಪತ್ತೆಯಾಗಿದ್ದರು. ಆ ಬಗ್ಗೆ ವೈಟ್‌ಫೀಲ್ಡ್ ಠಾಣೆಗೆ ದೂರು ನೀಡಿದ್ದೆವು. ಪೊಲೀಸರು ಮಗನನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದಾರೆ. ವಿಶೇಷ ತನಿಖಾ ತಂಡ ರಚಿಸಿದರೂ ತನಿಖೆಯಲ್ಲಿ ಪ್ರಗತಿ ಕಂಡುಬಂದಿಲ್ಲ’ ಎಂದು ದೂರಿದರು.


‘ಬ್ರಿಟಿಷ್ ಟೆಲಿಕಾಂ ಕಂಪೆನಿಯಲ್ಲಿ ನನ್ನ ಮಗ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ. ಆತ ನಾಪತ್ತೆಯಾದಾಗಿನಿಂದ ಕುಟುಂಬವು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.