ADVERTISEMENT

ಲಾಂಗ್ ತೋರಿಸಿ ಸುಲಿಗೆ: ಜನರ ಆತಂಕ

​ಪ್ರಜಾವಾಣಿ ವಾರ್ತೆ
Published 19 ಜುಲೈ 2022, 15:52 IST
Last Updated 19 ಜುಲೈ 2022, 15:52 IST

ಬೆಂಗಳೂರು: ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಠಾಣೆ ವ್ಯಾಪ್ತಿಯ ನಂದಗೋಕುಲ ಬಡಾವಣೆಯಲ್ಲಿ ಲಾಂಗ್ ತೋರಿಸಿ ಯುವಕರೊಬ್ಬರ ಸುಲಿಗೆ ಮಾಡಲಾಗಿದ್ದು, ಬೆಳಿಗ್ಗೆ ನಡೆದಿರುವ ಘಟನೆಯಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.

‘ಸೋಮವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು, ರಸ್ತೆಯಲ್ಲಿ ಹೊರಟಿದ್ದ ಯುವಕನಿಗೆ ಲಾಂಗ್ ತೋರಿಸಿ ಮೊಬೈಲ್ ಹಾಗೂ ಹಣ ಕಿತ್ತೊಯ್ದಿದ್ದಾರೆ. ಈ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದು ಸ್ಥಳೀಯರು ಹೇಳಿದರು.

‘ಡಿ.ಜೆ. ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಮೇಲಿಂದ ಮೇಲೆ ಸುಲಿಗೆ ಹಾಗೂ ಕಳ್ಳತನ ಪ್ರಕರಣಗಳು ನಡೆಯುತ್ತಿವೆ. ಪೊಲೀಸರು ಸಮರ್ಪಕವಾಗಿ ಗಸ್ತು ತಿರುಗದಿರುವುದೇ ಇದಕ್ಕೆ ಕಾರಣ’ ಎಂದು ದೂರಿದರು.

ADVERTISEMENT

‘ಹೊಯ್ಸಳ ಗಸ್ತು ವಾಹನಗಳ ಸಿಬ್ಬಂದಿ ಕಾಟಾಚಾರಕ್ಕೆ ಕೆಲಸ ಮಾಡುತ್ತಿದ್ದಾರೆ. ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೂ ಮೌನವಾಗುತ್ತಿದ್ದಾರೆ. ನಿಯಂತ್ರಣ ಕೊಠಡಿಗೆ ಕರೆ ಮಾಡಿದಾಗಲೂ ಗಸ್ತು ಸಿಬ್ಬಂದಿ ಸ್ಪಂದಿಸುವುದಿಲ್ಲ’ ಎಂದೂ ಆರೋಪಿಸಿದರು.

‘ಪೊಲೀಸ್ ಗಸ್ತು ಹೆಚ್ಚಳ ಮಾಡಬೇಕು. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಕಳುಹಿಸಬೇಕು’ ಎಂದೂ ಸ್ಥಳೀಯರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.