ADVERTISEMENT

ಕಿದ್ವಾಯಿ | 450 ಹಾಸಿಗೆಯ ಬ್ಲಾಕ್ ನಿರ್ಮಾಣ: ಶರಣಪ್ರಕಾಶ ಪಾಟೀಲ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2025, 4:32 IST
Last Updated 13 ಅಕ್ಟೋಬರ್ 2025, 4:32 IST
ಶರಣಪ್ರಕಾಶ ಪಾಟೀಲ
ಶರಣಪ್ರಕಾಶ ಪಾಟೀಲ   

ಬೆಂಗಳೂರು: ‘ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಸೇವೆ ವಿಸ್ತರಿಸುವ ಉದ್ದೇಶದಿಂದ ಶೀಘ್ರದಲ್ಲೇ ಹೊಸ ಬ್ಲಾಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಹೆಚ್ಚುವರಿಯಾಗಿ 450 ಹಾಸಿಗೆ ಲಭ್ಯವಾಗಲಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ತಿಳಿಸಿದರು.

ಗುರುವಾರ ಇಲ್ಲಿ ಸಂಸ್ಥೆಯ ಪರಿಶೀಲನಾ ಸಭೆ ನಡೆಸಿದ ಅವರು, ಹೊಸ ಯೋಜನೆ ಸಂಬಂಧ ಆದಷ್ಟು ಬೇಗ ನೀಲನಕ್ಷೆಯನ್ನು ಸಲ್ಲಿಸುವಂತೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.

‘ಪ್ರಸ್ತುತ ಕಿದ್ವಾಯಿಯಲ್ಲಿ 720 ಹಾಸಿಗೆಗಳಿವೆ. ಆದರೆ, ರೋಗಿಗಳ ಸಂಖ್ಯೆ ಇತ್ತೀಚೆಗೆ ಹೆಚ್ಚಾಗಿದೆ. ಹಾಸಿಗೆ ಕೊರತೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಹೊಸ ಬ್ಲಾಕ್‌ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಇದರಿಂದ ಖಾಸಗಿ ಕ್ಯಾನ್ಸರ್ ಆಸ್ಪತ್ರೆಗಳಿಗೆ ರೋಗಿಗಳು ಹೋಗುವುದು ತಪ್ಪುತ್ತದೆ. ಆರ್ಥಿಕ ದುರ್ಬಲ ವರ್ಗದವರಿಗೆ ಸಾರ್ವಜನಿಕ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವ ದರದಲ್ಲಿ ನೀಡಲು ಸಹಕಾರಿಯಾಗುತ್ತದೆ’ ಎಂದು ತಿಳಿಸಿದರು.

ದಾಖಲಿಸಿಕೊಳ್ಳಿ: ‘ರೋಗ ನಿರ್ಣಯಕ್ಕಾಗಿ ಬರುವವರಿಗೆ ಅಂತಿಮ ವರದಿಗಳು ದೊರೆಯುವವರೆಗೆ ಆಸ್ಪತ್ರೆಯ ವಾರ್ಡ್‌ಗಳಲ್ಲಿ ಒಳರೋಗಿಗಳಾಗಿ ದಾಖಲಿಸಿಕೊಳ್ಳಬೇಕು’ ಎಂದು ಸಂಸ್ಥೆಯ ಅಧಿಕಾರಿಗಳಿಗೆ ಸಚಿವರು ಇದೇ ವೇಳೆ ಸೂಚನೆ ನೀಡಿದರು.

ADVERTISEMENT

‘ಬೆಂಗಳೂರಿನ ರೋಗಿಗಳು ಹೆಚ್ಚಿನ ತೊಂದರೆಗಳನ್ನು ಎದುರಿಸದಿದ್ದರೂ, ದೂರದ ಜಿಲ್ಲೆಗಳಿಂದ, ವಿಶೇಷವಾಗಿ ಉತ್ತರ ಕರ್ನಾಟಕದವರಿಗೆ ಈ ರೀತಿಯ ಆಶ್ರಯದ ಅಗತ್ಯವಿದೆ’ ಎಂದು ಹೇಳಿದರು.

ವೇತನ ಬಿಡುಗಡೆಗೆ ಸೂಚನೆ
ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ಸಂಸ್ಥೆಗೆ ನೇಮಕಗೊಂಡ ದಾದಿಯರಿಗೆ ಹೆರಿಗೆ ರಜೆ ವೇಳೆ ಪೂರ್ಣ ವೇತನ ಪಾವತಿಸದಿರುವ ದೂರುಗಳಿಗೆ ಸಂಬಂಧಿಸಿದಂತೆ ಸ್ಪಂದಿಸಿದ ಸಚಿವರು ಪೂರ್ಣ ವೇತನವನ್ನು ಬಿಡುಗಡೆ ಮಾಡುವಂತೆ ಸಂಸ್ಥೆಯ ನಿರ್ದೇಶಕ ಡಾ.ಟಿ. ನವೀನ್ ಅವರಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.