ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿನ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರವು ಶನಿವಾರದಿಂದಲೇ ಕಾರ್ಯನಿರ್ವಹಿಸಲಿದೆ ಎಂದು ಸಂಸ್ಥೆಯ ನಿರ್ದೇಶಕ ಡಾ.ಟಿ. ನವೀನ್ ತಿಳಿಸಿದ್ದಾರೆ.
ಸಂಸ್ಥೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರದ ದುರಸ್ತಿಗೆ ಅಗತ್ಯವಿರುವ ಬಿಡಿ ಭಾಗಗಳನ್ನು ಆಮದು ಮಾಡಿಕೊಳ್ಳಲಾಗಿದೆ. ರೋಗಿಗಳ ಅನುಕೂಲಕ್ಕಾಗಿ ಮತ್ತೊಂದು ಯಂತ್ರವನ್ನು ಖರೀದಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಯಂತ್ರ ಖರೀದಿಯ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ರೋಗಿಗಳಿಗೆ ಸೂಕ್ತ ಕಾಲಕ್ಕೆ ಚಿಕಿತ್ಸೆ ಹಾಗೂ ಆರೈಕೆ ಬಗ್ಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸಂಸ್ಥೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರದ ದುರಸ್ತಿಯ ಅವಧಿಯಲ್ಲಿ ರೋಗಿಗಳಿಗೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ನಿಮ್ಹಾನ್ಸ್ ಮತ್ತು ಸಂಜಯ್ ಗಾಂಧಿ ಆಸ್ಪತ್ರೆ ಜತೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿತ್ತು. ರೋಗಿಗಳಿಗೆ ಅಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ಸಂಸ್ಥೆಯಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.