ADVERTISEMENT

ಕ್ಯಾನ್ಸರ್‌ ಆರೈಕೆ: ಕಿದ್ವಾಯಿ ಆಸ್ಪತ್ರೆಗೆ ಪ್ರಥಮ ಸ್ಥಾನ

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 23:10 IST
Last Updated 21 ಜನವರಿ 2026, 23:10 IST
<div class="paragraphs"><p>ಕಿದ್ವಾಯಿ ಆಸ್ಪತ್ರೆ</p></div>

ಕಿದ್ವಾಯಿ ಆಸ್ಪತ್ರೆ

   

ಬೆಂಗಳೂರು: ಅತ್ಯುತ್ತಮ ಆಸ್ಪತ್ರೆಗಳ ಸಮೀಕ್ಷೆಯಲ್ಲಿ ನಗರದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಕರ್ನಾಟಕದ ಪೈಕಿ ಪ್ರಥಮ ಸ್ಥಾನ ಪಡೆದಿದೆ.

2025ರಲ್ಲಿ ‘ದಿ ವೀಕ್‌ ಹನ್ಸಾ ಸಂಶೋಧನಾ ಸಮೀಕ್ಷೆ’ಯಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಭಾರತದಲ್ಲಿ 5ನೇ ಸ್ಥಾನ, ಕ್ಯಾನ್ಸರ್‌ ಆರೈಕೆಯಡಿ ಸರ್ಕಾರಿ ಆಸ್ಪತ್ರೆಗಳ ಪೈಕಿ ಕಿದ್ವಾಯಿ 3ನೇ ಸ್ಥಾನ ಪಡೆದಿದೆ ಎಂದು ಸಂಸ್ಥೆಯ ನಿರ್ದೇಶಕರಾದ ಡಾ.ಟಿ.ನವೀನ್‌ ತಿಳಿಸಿದ್ದಾರೆ.

ADVERTISEMENT

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಅತ್ಯಾಧುನಿಕ ಕ್ಯಾನ್ಸರ್ ಆರೈಕೆ ಮತ್ತು ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುತ್ತಿದೆ. ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿ ತಡೆಗಟ್ಟುವಿಕೆ, ಆರಂಭಿಕ ಹಂತದಲ್ಲೇ ಪತ್ತೆಹಚ್ಚುವಲ್ಲಿ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಫೆರಿಫೆರಲ್‌ ಕ್ಯಾನ್ಸರ್‌ ಘಟಕ ನಿರ್ಮಿಸಿ ರೋಗಿಗಳಿಗೆ ಶೀಘ್ರ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.