ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ
ಬೆಂಗಳೂರು: ಕ್ಯಾನ್ಸರ್ ಪೀಡಿತರ ಶಸ್ತ್ರಚಿಕಿತ್ಸೆಗೆ ರೋಬೊಟಿಕ್ ತಂತ್ರಜ್ಞಾನ ಅಳವಡಿಸಿಕೊಂಡಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಈ ತಂತ್ರಜ್ಞಾನದ ನೆರವಿನಿಂದ ಒಂದು ಸಾವಿರ ರೋಬೊಟಿಕ್ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸಿದೆ.
ಸಂಸ್ಥೆಯು ಒಂಬತ್ತು ವರ್ಷಗಳಲ್ಲಿ ಈ ಸಾಧನೆ ಮಾಡಿದೆ. ಡಾ. ವಿನ್ಸಿ ರೋಬೊಟಿಕ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು, ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುತ್ತಿದೆ. ಅಮೆರಿಕದ ಇನ್‌ಸ್ಟಿಟ್ಯೂಟ್ ಆಫ್ ಸರ್ಜಿಕಲ್ ರಿಸರ್ಚ್ ಸಂಸ್ಥೆಯು ಡಾ.ವಿನ್ಸಿ ರೋಬೊಟಿಕ್ ಯಂತ್ರವನ್ನು ಅಭಿವೃದ್ಧಿಪಡಿಸಿದೆ. ರಾಜ್ಯದಲ್ಲಿ ಸರ್ಕಾರಿ ವ್ಯವಸ್ಥೆಯಡಿ ಕಿದ್ವಾಯಿ ಸಂಸ್ಥೆಯಲ್ಲಿ ಮಾತ್ರ ಈ ರೋಬೊ ಕಾರ್ಯಾಚರಣೆ ಮಾಡುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ತಿಳಿಸಿದೆ.
‘ಸಂಸ್ಥೆಯು ಒಂದು ಸಾವಿರ ರೋಬೊಟಿಕ್ ಶಸ್ತ್ರಚಿಕಿತ್ಸೆ ಪೂರೈಸಿರುವುದು ಶ್ಲಾಘನೀಯ. ನೂತನ ವೈದ್ಯಕೀಯ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು, ರೋಗಿಗಳಿಗೆ ಶೀಘ್ರಗತಿಯಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.