ಬೆಂಗಳೂರು: ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದ ದಿನವೇ ಮದ್ಯದ ಅಮಲಿನಲ್ಲಿ ಸ್ನೇಹಿತರ ನಡುವೆ ಗಲಾಟೆ ಆಗಿದ್ದು, ಕರಣ್‌ಸಿಂಗ್ ಎಂಬಾತನ ಕೊಲೆಯಲ್ಲಿ ಅಂತ್ಯವಾಗಿದೆ.
ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ಸೀಡೆದಹಳ್ಳಿ ಬಳಿ ಸೋಮವಾರ ಬೆಳಿಗ್ಗೆ ಈ ಕೊಲೆ ನಡೆದಿದೆ. ಕೊಲೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
‘ಸೋಮವಾರ ಬೆಳಿಗ್ಗೆಯಿಂದಲೇ ಮದ್ಯದ ಅಂಗಡಿಗಳು ತೆರೆದಿದ್ದವು. ಕರಣ್‌ಸಿಂಗ್, ಆತನ ಸ್ನೇಹಿತ ಪ್ರಭು ಹಾಗೂ ಇತರರು ಮದ್ಯ ಖರೀದಿಸಿ ತಂದಿದ್ದರು. ಕೊಠಡಿಯೊಂದರಲ್ಲಿ ಮದ್ಯದ ಪಾರ್ಟಿ ಏರ್ಪಡಿಸಿದ್ದರು’ ಎಂದು ಪೊಲೀಸರು ಹೇಳಿದರು.
‘ಮದ್ಯದ ಅಮಲಿನಲ್ಲಿ ಸ್ನೇಹಿತರ ನಡುವೆ ಜಗಳ ಶುರುವಾಗಿತ್ತು. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಅದೇ ವೇಳೆಯೇ ಆರೋಪಿ ಪ್ರಭು, ಚಾಕುವಿನಿಂದ ಕರಣ್ ಸಿಂಗ್ ಎದೆಗೆ ಚುಚ್ಚಿದ್ದ. ತೀವ್ರ ರಕ್ತಸ್ರಾವವಾಗಿ ಕರಣ್‌ಸಿಂಗ್ ಮೃತಪಟ್ಟ’ ಎಂದು ಪೊಲೀಸರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.