ADVERTISEMENT

ಪಾಲಿಕೆ ಸದಸ್ಯರ ಆಸ್ತಿ ವಿವರ: ಇನ್ನೆರಡು ವಾರ ಕಾಲಾವಕಾಶ

​ಪ್ರಜಾವಾಣಿ ವಾರ್ತೆ
Published 10 ಜುಲೈ 2019, 19:56 IST
Last Updated 10 ಜುಲೈ 2019, 19:56 IST

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸದಸ್ಯರು ತಮ್ಮ ಆಸ್ತಿ ಹಾಗೂ ಸಾಲದ ವಿವರಗಳ ಮಾಹಿತಿ ಸಲ್ಲಿಸಲು ಹೈಕೋರ್ಟ್ ಇನ್ನೂ ಎರಡು ವಾರಗಳ ಕಾಲಾವಕಾಶ ನೀಡಿದೆ.

ಈ ಕುರಿತಂತೆ ಅನಿಲ್‌ ಕುಮಾರ್ ಶೆಟ್ಟಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಬಿಬಿಎಂಪಿ ಪರ ಹಾಜರಿದ್ದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ‘ಪಾಲಿಕೆ ಸದಸ್ಯರು ತಮ್ಮ ಆಸ್ತಿಪಾಸ್ತಿ ಹಾಗೂ ಸಾಲದ ವಿವರಗಳ ಮಾಹಿತಿ ಕ್ರೋಡೀಕರಣಕ್ಕೆ ಇನ್ನಷ್ಟು ಸಮಯ ಬೇಕು’ ಎಂದು ಕೋರಿದರು.

ADVERTISEMENT

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಿದೆ.

‘ಕರ್ನಾಟಕ ಪೌರಾಡಳಿತ ಕಾಯ್ದೆ–1979ರ ಅನ್ವಯ, ನಿಗದಿತ ಸಮಯದಲ್ಲಿ ಆಸ್ತಿ ವಿವರ ಘೋಷಿಸಿಕೊಳ್ಳದ 34 ಪಾಲಿಕೆ ಸದಸ್ಯರ ಸದಸ್ಯತ್ವ ಅನೂರ್ಜಿಗೊಳಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.