ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಬೆಂಗಳೂರಿನ ಬಾಗಲಗುಂಟೆಯ ಎಂಇಐ ಲೇಔಟ್‌ನ 60 ಅಡಿ ರಸ್ತೆಯಲ್ಲಿ ನಂದಿನಿ ಕೆಫೆ ಮೂ ಆರಂಭಿಸಿದೆ.
ಬೆಂಗಳೂರಿನ ವಿವಿಧ ಭಾಗಗಳಲ್ಲಿ ಕೆಎಂಎಫ್ ಈಗಾಗಲೇ ಪ್ರಾರಂಭಿಸಿರುವ ನಂದಿನಿ ಕೆಫೆಗೆ ಉತ್ತಮ ಪ್ರತಿಕ್ರಿಯೆ ದೊರೆತ ನಂತರ ಈ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ.
ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಅವರು ನೂತನ ಕೆಫೆಯನ್ನು ಸೋಮವಾರ ಉದ್ಘಾಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.