ಬೆಂಗಳೂರು: ದೆಹಲಿಯ ನಂತರ, ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಿಗೆ ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಮಾರುಕಟ್ಟೆ ವಿಸ್ತರಿಸಲು ಕರ್ನಾಟಕ ಹಾಲು ಮಹಾ ಮಂಡಳ(ಕೆಎಂಎಫ್) ಸಿದ್ಧತೆ ನಡೆಸುತ್ತಿದ್ದು, ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಹಾಲು ಸಂಸ್ಕರಣೆ ಮತ್ತು ಪ್ಯಾಕಿಂಗ್ ಘಟಕ ಆರಂಭಿಸುವ ಕುರಿತು ಸ್ಥಳೀಯ ಹಾಲು ಮಾರಾಟಗಾರರೊಂದಿಗೆ ಸಭೆ ನಡೆಸಿದೆ.
ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಅವರ ನೇತೃತ್ವದಲ್ಲಿ ಸಭೆ ನಡೆದಿದೆ.
ಸಭೆಯಲ್ಲಿ ಮಾತನಾಡಿದ ಶಿವಸ್ವಾಮಿ, ‘ಹತ್ರಾಸ್‌ನಲ್ಲಿ ಘಟಕ ಆರಂಭಿಸುವುದರಿಂದ ಆಗ್ರಾ, ಮಥುರಾ, ಮೀರತ್, ಅಲಿಘಢ ನಗರ ಪ್ರದೇಶಗಳಿಗೆ ಹಾಲು ಮಾರಾಟ ವಿಸ್ತರಿಸಲು ಅನುಕೂಲವಾಗುತ್ತದೆ. ಮಾರ್ಚ್ 16ರಿಂದ ಈ ಎಲ್ಲ ನಗರಗಳಲ್ಲಿ ನಂದಿನಿ ಹಾಲಿನ ಮಾರಾಟ ಆರಂಭವಾಗಲಿದೆ’ ಎಂದು ತಿಳಿಸಿದರು.
‘ರಾಜಸ್ಥಾನದ ಜೈಪುರದಲ್ಲೂ ನಂದಿನ ಹಾಲು ಮಾರಾಟ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲಿಗೂ ಶೀಘ್ರದಲ್ಲೇ ಹಾಲಿನ ಉತ್ಪನ್ನಗಳನ್ನು ಪೂರೈಸಲಾಗುತ್ತದೆ’ ಎಂದು ಅವರು ವಿವರಿಸಿದರು.
ಸಭೆಯಲ್ಲಿ ಕೆಎಂಎಫ್‌ನ ಹಿರಿಯ ಅಧಿಕಾರಿಗಳು ಮತ್ತು ಸ್ಥಳೀಯ ಹಾಲು ಮಾರಾಟಗಾರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.