ADVERTISEMENT

ಸಂಶೋಧನೆಯಿಂದ ಜ್ಞಾನ: ಡಾ. ಸಿ.ಎನ್.ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2019, 22:03 IST
Last Updated 28 ಡಿಸೆಂಬರ್ 2019, 22:03 IST
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥನಾರಾಯಣ ಅವರು ಸಂಸ್ಥೆಯ ಅಧ್ಯಕ್ಷ ಕೆ.ಎಂ. ನಾಗರಾಜ್‌ ಜತೆ ಚರ್ಚಿಸಿದರು. ಶಾಸಕ ರಾಮಲಿಂಗಾರೆಡ್ಡಿ, ಲೋಕಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಯು.ಬಿ.ವೆಂಕಟೇಶ್ ಇದ್ದಾರೆ - ಪ್ರಜಾವಾಣಿ ಚಿತ್ರ
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥನಾರಾಯಣ ಅವರು ಸಂಸ್ಥೆಯ ಅಧ್ಯಕ್ಷ ಕೆ.ಎಂ. ನಾಗರಾಜ್‌ ಜತೆ ಚರ್ಚಿಸಿದರು. ಶಾಸಕ ರಾಮಲಿಂಗಾರೆಡ್ಡಿ, ಲೋಕಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಯು.ಬಿ.ವೆಂಕಟೇಶ್ ಇದ್ದಾರೆ - ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ತಿಳಿವಳಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಸಂಶೋಧನೆಗಳು ನಡೆಯಬೇಕೇ ಹೊರತು, ಅವು ಮೆಚ್ಚುಗೆ ಗಳಿಸುವ ಸಾಧನ ಆಗಬಾರದು’ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಕಮ್ಯುನಿಟಿ ಸೆಂಟರ್ ಆಫ್ ಎಜ್ಯುಕೇಷನ್ ಇನ್‌ಸ್ಟಿಟ್ಯೂಟ್‌ನ ವಜ್ರಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ‘ಜಗತ್ತಿನಾದ್ಯಂತ ನಡೆಯುವ ಸಂಶೋಧನೆಗಳು ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಇರಬೇಕು. ಶಿಕ್ಷಣ ಕೇವಲ ಪದವಿ ಪಡೆಯಲು ಸೀಮಿತವಾಗಬಾರದು. ಬದುಕು ರೂಪಿಸಲು ಶಿಕ್ಷಣ ನೆರವಾಗಬೇಕು’ ಎಂದು ಅವರು ಹೇಳಿದರು.

ಶಾಸಕ ರಾಮಲಿಂಗಾರೆಡ್ಡಿ ಮಾತನಾಡಿ, ‘ಹಣ ಗಳಿಕೆಯೇ ಶಿಕ್ಷಣ ಸಂಸ್ಥೆಗಳ ಉದ್ದೇಶವಾಗಬಾರದು. ವಿದ್ಯಾರ್ಥಿಗಳ ಪರವಾದ ನಿಲುವು ವ್ಯಕ್ತಪಡಿಸಲು ಶಿಕ್ಷಣ ಸಂಸ್ಥೆಗಳು ಮುಂದಾಗಬೇಕು. ಸೇವಾ ಮನೋಭಾವದಿಂದ ಶಿಕ್ಷಣ ನೀಡುತ್ತಿರುವ ಕಮ್ಯುನಿಟಿ ಸೆಂಟರ್ ಕೆಲಸ ಇತರ ಸಂಸ್ಥೆಗಳಿಗೆ ಮಾದರಿ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.